ತಾಲೂಕು
ರಾಯಚೂರು | ರೋಗಿ ಸಾವು; ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ; ಪ್ರಕರಣ ದಾಖಲು.
ಹಲ್ಲೆಯ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆ.
ರಾಯಚೂರು | ರೋಗಿ ಸಾವು; ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ; ಪ್ರಕರಣ ದಾಖಲು.
ರಾಯಚೂರು : ಸತ್ಯಮಿಥ್ಯ ( ಜೂ -28).
ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಸಾವನ್ನಪ್ಪಿದ್ದು, ರೋಗಿಯ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಜೂನ್ 25ರಂದು ರೋಗಿ ಮೊಹಮದ್ ಹಮೀದ್ ಎಂಬವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ಸಿಬ್ಬಂದಿಗಳು ಚಿಕಿತ್ಸೆ ನೀಡಲು ಆರಂಭಿಸಿದ್ದಾರೆ. ಚಿಕಿತ್ಸೆ ಫಲಿಸದೆ ಹಮೀದ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹಮೀದ್ ಕುಟುಂಬಸ್ಥರು ಆಸ್ಪತ್ರೆಯಲ್ಲಿ ಗಲಾಟೆ ಮಾಡಿ, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ಖುರ್ಚಿ, ಮೇಜುಗಳನ್ನು ಮುರಿದು ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಆಸ್ಪತ್ರೆಯ ಸಿಸಿ ಟಿವಿ ಕ್ಯಾಮರಾದಲ್ಲಿ ಹಲ್ಲೆಯ ದೃಶ್ಯ ಸೆರೆಯಾಗಿದೆ .
ಘಟನೆ ಸಂಬಂಧ ರಾಯಚೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಮೀದ್ ಅವರ ಸಂಬಂಧಿಗಳಾದ ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ವರದಿ : ಶಿವು ರಾಠೋಡ