ಗಜೇಂದ್ರಗಡ : ಪಿಂಜಾರ್ / ನದಾಫ್ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಲು ಮನವಿ.
ಗಜೇಂದ್ರಗಡ : ಸತ್ಯಮಿಥ್ಯ (ಜುಲೈ -22).
ಕರ್ನಾಟಕ ರಾಜ್ಯ ನದಾಫ್ / ಪಿಂಜಾರ ಗಜೇಂದ್ರಗಡ ತಾಲೂಕಾ ಘಟಕದವತಿಯಿಂದ ಪಿಂಜಾರ / ನದಾಫ್ ಜಾತಿಗಳ ಅಭಿವೃದ್ಧಿ ನಿಗಮಕ್ಕೆ ಅನುದಾನ ಒದಗಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಕಾರ್ಯದರ್ಶಿ ದಾವಲ್ ಸಾಬ್ ನದಾಫ. ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ನಮ್ಮ ಸಮುದಾಯದ ಪರಿಸ್ಥಿತಿಯನ್ನು ತಿಳಿದುಕೊಂಡು. ಪಿಂಜಾರ್ / ನದಾಫ್ ಜಾತಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವ ಮೂಲಕ ಸಹಕರಿಸಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಸಮುದಾಯಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಆದ್ದರಿಂದ ಕೂಡಲೇ ಕರ್ನಾಟಕ ಸರ್ಕಾರ ನಮ್ಮ ಸಮುದಾಯದ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆಗೊಳಿಸಬೇಕು. ಆ ಕಾರಣಕ್ಕೆ ಏಕಕಾಲದಲ್ಲಿ ರಾಜ್ಯಾಧ್ಯಂತ ಮನವಿ ಸಲ್ಲಿಸುತ್ತಿದ್ದೇವೆ. ರಾಜ್ಯದಲ್ಲಿ 25 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ನಮ್ಮ ಜನತೆ ಇದ್ದಾರೆ. ಕೂಡಲೇ ಸರ್ಕಾರ ಸ್ಪಂದಿಸದೆ ಇದ್ದರೆ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರಮಾಣದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದರು.
ನಗರದ ಕಾಲಕಾಲೇಶ್ವರ ವೃತ್ತದಲ್ಲಿ ಸೇರಿದ ಪಿಂಜಾರ್ / ನದಾಫ್ ಸಮುದಾಯದವರು ಅಲ್ಲಿಂದ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಾಬಣ್ಣಸಾಬ್ ನದಾಫ್, ವಜೀರಸಾಬ್ ನದಾಫ್, ಇಮಾಮಹುಸೇನ್ ನದಾಫ್, ಜಾಕಿರ್ ಹುಸೇನ್ ಲಕ್ಕಳಕಟ್ಟಿ, ರಹಮಾನ್ ಸಾಬ್ ನದಾಫ್, ಚಂದಸಾಬ್ ನದಾಫ್, ಯಮನೂರಸಾಬ್ ವೀರಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ : ಸುರೇಶ ಬಂಡಾರಿ.