ಮಂಗಳೂರು – ಜನಸ್ಪಂದನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಅತುಲ್ ಚಾಲನೆ : ದೇವಸ್ಥಾನ ನಿರ್ಮಾಣಕ್ಕೆ ವೃದ್ಧೆ ಮನವಿ.
ಮಂಗಳೂರು – ಜನಸ್ಪಂದನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಅತುಲ್ ಚಾಲನೆ : ದೇವಸ್ಥಾನ ನಿರ್ಮಾಣಕ್ಕೆ ವೃದ್ಧೆ ಮನವಿ.
ಮಂಗಳೂರು : ಸತ್ಯಮಿಥ್ಯ (ಜುಲೈ -23).
ಗ್ರಾಮದ ಬಾಪೂಜಿ ಡಿ.ಎಡ್.ಕಾಲೇಜ ಆವರಣದಲ್ಲಿ ಇಂದು ಕೊಪ್ಪಳ ಜಿಲ್ಲಾ ಮತ್ತು ತಾಲೂಕಾಡಳಿತ, ಕುಕನೂರ ಪಂಚಾಯತ್ ಹಾಗೂ ಮಂಗಳೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ನಳಿನ್ ಕುಮಾರ ಅತುಲ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ರೈತರ ಸಮಸ್ಯೆಗಳಾದ ಬೆಳೆವಿಮೆ, ನಮ್ಮ ಹೊಲ ನಮ್ಮ ದಾರಿ ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವ ಬಗ್ಗೆ ಮಾಹಿತಿ ನೀಡಿದರು. ಸರ್ಕಾರಿ ಯೋಜನೆಯಲ್ಲಿ ನಿರ್ಮಾಣವಾದ ಮನೆಗಳಿಗೆ ಹಕ್ಕು ಪತ್ರ ನೀಡುವಲ್ಲಿ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದರು. ಸಾರ್ವಜನಿಕರ ವಯಕ್ತಿಕ ವ್ಯಾಜ್ಯಗಳಿಗೂ ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆಗಳು ನಡೆದವು. ವಿಶೇಷವಾಗಿ 80 ವಯಸ್ಸಿನ ಅಜ್ಜಿ ದೇವಸ್ಥಾನ ನಿರ್ಮಾಣಕ್ಕೆ ಮನವಿ ಸಲ್ಲಿಸಲು ಬಂದ ಸಂದರ್ಭದಲ್ಲಿ ಖುದ್ದಾಗಿ ಜಿಲ್ಲಾಧಿಕಾರಿಗಳೇ ಎದ್ದು ನಿಂತು ಮನವಿ ಸ್ವೀಕರಿಸಿದ ಸಂದರ್ಭ ಒದಗಿಬಂತು.ವಿಶೇಷವಾಗಿ ಗ್ರಾಮದ ಮುಖ್ಯ ರಸ್ತೆಯನ್ನು ಕೋರ್ಟ ಆದೇಶದಂತೆ ನಿರ್ಮಾಣ ಮಾಡಬೇಕು ಎಂದರು.
ಕಾರ್ಯಕ್ರಮವನ್ನು ಶಾಲಾ ಮಕ್ಕಳು ರೈತ ಗೀತೆ ಹಾಡವ ಮೂಲಕ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿಗಳು ರೈತಗೀತೆ ಹಾಡಿದ ವಿಧ್ಯಾರ್ಥಿಗಳಿಗೆ ಪುಸ್ತಕ ಹಾಗೂ ಪೆನ್ನುಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಮ್ ಪಾಂಡೆ, ಮಾನ್ಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಸಾವಿತ್ರಿ ಖಡಿ, ಎಸಿ ಮಹೇಶ್ ಮಾಲಗಿತ್ತಿ, ಡಿ.ಡಿ.ಎಚ್ ಕೃಷ್ಣಾ ಉಕ್ಕುಂದ, ಎಸ್.ಪಿ ರಾಮ್ ಎಲ್ ಅರಸಿದ್ದಿ, ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂತೋಷ ಬಿರಾದರ್ ಪಾಟೀಲ್, ತಹಶೀಲ್ದಾರರು, ಸ್ಥಳೀಯ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಾದ ನೀಲಂ ಚಳಗೇರಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಕ್ರಪ್ಪ ಚಿನ್ನೂರ (ಮುತ್ತಪ್ಪ) ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳು ಸದಸ್ಯರು ಹಾಗೂ ಸಿಬ್ಬಂದಿಗಳು ಮಂಗಳೂರು ಹೋಬಳಿಯ ಎಲ್ಲಾ ಗ್ರಾಮ ಪಂಚಾಯತಿಗಳ ಸಾರ್ವಜನಿಕರು ಹಾಜರಿದ್ದರು.
ವರದಿ : ಚನ್ನಯ್ಯ ಹಿರೇಮಠ.