ರಾಜ್ಯ ಸುದ್ದಿ

ರಾಜ್ಯದಲ್ಲಿ ಅಹಿಂದ ವರ್ಗದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಪ್ರತಿಭಟನೆ

Share News

ರಾಜ್ಯದಲ್ಲಿ ಅಹಿಂದ ವರ್ಗದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಪ್ರತಿಭಟನೆ

ಗಜೇಂದ್ರಗಡ:ಸತ್ಯಮಿಥ್ಯ ( ಜುಲೈ -23)

ಇಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ ಎಫ್ ಐ) ಗಜೇಂದ್ರಗಡ ತಾಲ್ಲೂಕು ಸಮಿತಿಯು ನೇತೃತ್ವದಲ್ಲಿ ಮಾನ್ಯ ತಹಶಿಲ್ದಾರರ ಮೂಲಕ ಮಾನ್ಯ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಎಫ್ ಐ ನ ರಾಜ್ಯ ಪದಾಧಿಕಾರಿ ಗಣೇಶ ರಾಠೋಡ ಮಾತನಾಡಿ ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ ಕತ್ತರಿ ಪ್ರಯೋಗ ಮಾಡಿರುವ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಸಂಘಟನೆಯು ತೀವ್ರವಾಗಿ ಖಂಡಿಸುತ್ತದೆ.

ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ವಿದ್ಯಾರ್ಥಿಗಳಿಗೆ SSLC ಯಲ್ಲಿ ಶೇಕಡಾ 60 ರಿಂದ 74.99 ಫಲಿತಾಂಶ ದೊಂದಿಗೆ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 7000 ಪ್ರೋತ್ಸಾಹ ಧನ ಹಣವನ್ನು ಕೊಡುತ್ತ ಇದ್ದದನ್ನು ಈ ಶೈಕ್ಷಣಿಕ ವರ್ಷದಲ್ಲಿ ರದ್ದು ಮಾಡಿದ್ದಾರೆ SCP/TSP ಯೋಜನೆಗಾಗಿ ಸಾವಿರಾರು ಕೋಟಿ ರೂಪಾಯಿ ಹಣ ಖರ್ಚು ಮಾಡುತ್ತಿದ್ದೇವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿಗಳೇ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರೆ ಒಂದು ಸಾರಿ ನಿಮ್ಮ ಇಲಾಖೆಯ ಪರಿಸ್ಕೃತ ಆದೇಶವನ್ನು ನೋಡಿ ಶೋಷಿತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಉತ್ತೇಜಿಸಲು ಯೋಜನೆಗಳನ್ನು ರೂಪಿಸಬೇಕೆ ವಿನಹ ಆ ಯೋಜನೆಗಳಿಗೆ ಕತ್ತರಿ ಪ್ರಯೋಗ ಪರಿಸ್ಕೃತ ಆದೇಶದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಏನು ಹೇಳಲು ಬಯಸುತ್ತೀರಿ ಎಂದು ಪ್ರಶ್ನಿಸಿದರು.

ನಂತರ ಎಸ್ ಎಫ್ ಐ ನ ಜಿಲ್ಲಾ ಮುಖಂಡರಾದ ಚಂದ್ರು ರಾಠೋಡ ಮಾತನಾಡಿ ಹಿಂದುಳಿದ ವರ್ಗಗಳ ಸಮುದಾಯದ ಮುಖ್ಯಮಂತ್ರಿ ಎಂದು ಹೇಳುತ್ತಿರುವ ಸಿದ್ದರಾಮಯ್ಯನವರೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಈ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಮರುಪಾವತಿ ವಿಷಯಕ್ಕೆ ಪರಿಷ್ಕೃತ ಆದೇಶವನ್ನು ಹೊರಡಿಸಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಮಾತ್ರ ಶುಲ್ಕ ಮರುಪಾವತಿಗೆ ಅರ್ಹತೆ ಹೊಂದಿದ್ದಾರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗೆ ಅರ್ಹತೆ ಹೊಂದಿಲ್ಲ ಅವರಿಗೆ ಶುಲ್ಕ ಮರುಪಾವತಿ ಕೊಡವುದಿಲ್ಲ ಎಂದು ಹೇಳುತ್ತಿದ್ದಾರೆ ಸಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳೇ ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾವಾಗ ಸರಿ ಪಡಿಸುತ್ತಿರಿ ಎಂದು ಸರ್ಕಾರವನ್ನು ಪ್ರಶ್ನಿಸಿದರು.

ಎಸ್ ಎಫ್ ಐ ನ ತಾಲ್ಲೂಕು ಮುಖಂಡರಾದ ಅನಿಲ ರಾಠೋಡ ಮಾತನಾಡಿ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಪರವಾಗಿ ನಮ್ಮ ಸರ್ಕಾರ ಅಲ್ಪಸಂಖ್ಯಾತರ ರಕ್ಷಣೆಗಾಗಿ ಬದ್ದ ಇದೆ ಎಂದು ಹೇಳುತ್ತಿರುವ ಮುಖ್ಯಮಂತ್ರಿಗಳೇ ಇದೇ ಅಲ್ಪಸಂಖ್ಯಾತ ಸಮುದಾಯದ ಸಂಶೋಧನಾ ಮಾಡುತ್ತಿರುವ ಪಿಎಚ್ಡಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಇದ್ದ ಪ್ರೋತ್ಸಾಹ ಧನವನ್ನು 25000 ರೂಪಾಯಿ ದಿಂದ 10000 ಸಾವಿರ ರೂಪಾಯಿ ಈ ಹಿಂದಿನ BJP ಸರಕಾರ ಕಡಿತ ಮಾಡಿತ್ತು ಅದನ್ನು ಸರಿಪಡಿಸಿ ಎಂದು ಒಂದು ವರ್ಷದಿಂದ ಸಂಬಂಧಿಸಿದ ಸಚಿವರಿಗೆ ಮನವಿ ಪತ್ರ ಕೊಡುತ್ತ ಬಂದರು ಯಾಕೆ ಸರಿಮಾಡುತ್ತ ಇಲ್ಲ ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಇಂದು ದಿನಾಂಕ 23/7/2024 ರಂದು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಗಜೇಂದ್ರಗಡ ತಾಲ್ಲೂಕು ಸಮಿತಿಯು ಪ್ರತಿಭಟನೆ ಮೂಲಕ ಆಗ್ರಹ ಮಾಡುತ್ತದೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ತಿರುಪತಿ, ಅಂದಪ್ಪ ಕುರಿ, ಮೈಬು ಹವಾಲ್ದಾರ್, ಬಸು, ಕನಕಪ್ಪ ಮತ್ತು ಇತರರು ಹಾಜರಿದ್ದರು.

ವರದಿ : ಸುರೇಶ ಬಂಡಾರಿ.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!