ತಾಲೂಕು

ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಪ್ರಯುಕ್ತ ಕಾರ್ಮಿಕ ಇಲಾಖೆಯಿಂದ ಜಾಗೃತಿ.

Share News

ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಪ್ರಯುಕ್ತ ಕಾರ್ಮಿಕ ಇಲಾಖೆಯಿಂದ ಜಾಗೃತಿ.

ನಾರಾಯಣಾಪುರ:ಸತ್ಯಮಿಥ್ಯ (ಆಗಸ್ಟ್ -16)

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ PAN-INDIA Rescue and Rehabilitation Campaing ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಕೊಡೇಕಲ್   ಉಪತಹಸೀಲ್ದಾರ ಕಲ್ಲಪ್ಪರವರು ಮಾತನಾಡಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ ಮತ್ತು ರಾಜ್ಯ ಕಾನೂನು ಪ್ರಾಧಿಕಾರ ಕಾರ್ಮಿಕ ಆಯುಕ್ತರು ಬೆಂಗಳೂರು ರವರ ಸೂಚನೆಯಂತೆ, ಸ್ವತಂತ್ರ ದಿನಾಚರಣೆ 2024ರ ಅಂಗವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ದಿನಾಂಕ: 01.08.2024 ರಿಂದ 31.08.2024ರ ರವರೆಗೆ ರಕ್ಷಣಾ ಕಾರ್ಯಚರಣೆ ಕೈಗೊಳ್ಳಲಾಗುವದು.

ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು. ನಂತರ ಮಾತನಾಡಿದ ಕಾರ್ಮಿಕ ನಿರೀಕ್ಷಕರಾದ ಶಿವರಾಜ್ ಜಮಾದಾರ್ ರವರು ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು, ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಇಲಾಖೆಯಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಪಟ್ಟಣದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ ನಡೆಸಿ, ಒಬ್ಬ ಮಗುವನ್ನು ರಕ್ಷಿಸಲಾಯಿತು. ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ  ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿಯಂತ್ರಣವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರಿಗೆ ರೂ, 20,000 ರೂಗಳಿಂದ 50,000 ರೂ ಗಳವರೆಗೆ ದಂಡ ಮತ್ತು 6 ತಿಂಗಳುಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

ಹಠಾತ್ ದಾಳಿ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಪಿಡಿಒ, ಮಾರ್ಗದರ್ಶಿ ಸಂಸ್ಥೆಯವರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ, ಕಾರ್ಮಿಕ ಇಲಾಖೆಯ ಬಾಲುನಾಯಕ ಹಾಜರಿದ್ದರು.

ವರದಿ : ಶಿವು ರಾಠೋಡ್.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!