ಗದಗ : ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ನಡೆದ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ಪ್ರತಿಭಟನೆ.
ಗದಗ : ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ನಡೆದ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ಪ್ರತಿಭಟನೆ.
ಗದಗ:ಸತ್ಯಮಿಥ್ಯ (ಆಗಸ್ಟ್ -17).
ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ನಡೆದ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ನಗರದಲ್ಲಿ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು .
ಗದಗ ಜಿಲ್ಲಾ ಐಎಂಎ ಪ್ರಸೂತಿ ಸ್ತ್ರೀ ರೋಗ ತಜ್ಞ ಸಂಘದ ಸದಸ್ಯರು ಗದಗ ನಗರದ ಮಹಾತ್ಮಾ ಗಾಂಧಿ ಸರ್ಕಲ್ ನಿಂದ ಪ್ರತಿಭಟನೆ ಆರಂಭಿಸಿದ್ದಾರೆ.
ಗದಗ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ನೀಡಲಿದ್ದಾರೆ.ಇಂದು ಮುಂಜಾನೆ 6 ಗಂಟೆಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೆ ಖಾಸಗಿ ಒಪಿಡಿ ಬಂದ್ ಮಾಡಲಾಗಿತ್ತು .
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷವಾದರೂ ಮಹಿಳೆಯರ ಪ್ರಾಣಕ್ಕೆ ಸುರಕ್ಷಿತ ಇಲ್ಲ ಎಂದು ಕಿಡಿಕಾರಿದ್ದು, ಆಸ್ಪತ್ರೆಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.ನೂರಾರು ಸಂಖ್ಯೆಯಲ್ಲಿ ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ವರದಿ : ಮುತ್ತು ಗೋಸಲ.