
ಗದಗ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಅಹ್ವಾನ.
ಗದಗ : ಸತ್ಯಮಿಥ್ಯ (ಅಗಸ್ಟ 19)
ಗದಗ ಜಿಲ್ಲೆಯ ಗದಗ , ರೋಣ ಹಾಗೂ ಶಿರಹಟ್ಟಿ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ವೆಬ್‌ಸೈಟ್ ವಿಳಾಸ https://karnemakeone.kar.nic.in/abcdದ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.