ಸ್ಥಳೀಯ ಸುದ್ದಿಗಳು

ಪಂಡಿತ ಪುಟ್ಟರಾಜ ಗವಾಯಿಗಳ 14ನೇ ಪುಣ್ಯಸ್ಮರಣೋತ್ಸವ.

Share News

ಪಂಡಿತ ಪುಟ್ಟರಾಜ ಗವಾಯಿಗಳ 14ನೇ ಪುಣ್ಯಸ್ಮರಣೋತ್ಸವ.

ಗದಗ:ಸತ್ಯಮಿಥ್ಯ(ಸ-13).

ಗದಗ-ಬೆಟಗೇರಿ ಅವಳಿ ನಗರ ಸೇರಿ ಜಿಲ್ಲೆಯ ವಿವಿಧೆಡೆ ಗಾನಯೋಗಿ ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳ 14ನೇ ಪುಣ್ಯಸ್ಮರಣೋತ್ಸವ ಆಚರಿಸಲಾಯಿತು.

ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ವಿವಿಧ ಭಜನಾ ಮಂಡಳಿಗಳ ತಾಳ ಮೇಳದ ಸದ್ದಿನ ಜತೆಗೆ ಸಂಗೀತದ ಸ್ವರದ ನಡುವೆ ಅನ್ನಸಂತರ್ಪಣೆ ಜರುಗಿತು.

ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿಗಳ 14ನೇ ಪುಣ್ಯಾರಾಧನೆ ನಿಮಿತ್ತ ವಿವಿಧ ಸಂಘ-ಸಂಸ್ಥೆಗಳು, ಅಟೋ ಚಾಲಕರ, ಮಾಲಿಕರ ಸಂಘ, ಗ್ರೇನ್ ಮಾರುಕಟ್ಟೆ ವ್ಯಾಪಾರಸ್ಥರು ಸೇರಿ ಬೆಟಗೇರಿ, ನರಸಾಪುರ, ಹುಯಿಲಗೋಳ, ನಾರಾಯಣಪುರ, ಕೋಟುಮಚಗಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಗ್ರಾಮಸ್ಥರು ವೇದಿಕೆ ನಿರ್ಮಿಸಿ ಪುಟ್ಟರಾಜ ಕವಿ ಗವಾಯಿಗಳ ಭಾವಚಿತ್ರಕ್ಕೆ ಪೂಜೆ, ನಮನ ಸಲ್ಲಿಸಿದರು.

ವಿಶೇಷ ಪೂಜೆ: ಪಂಡಿತ ಪುಟ್ಟರಾಜ ಕವಿಗವಾಯಿಗಳ ಪುಣ್ಯಸ್ಮರಣೆ ಹಿನ್ನೆಲೆ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಬೆಳಿಗ್ಗೆ ರುದ್ರಾಭಿಷೇಕ, ವಿವಿಧ ಧಾರ್ಮಿಕ ಹಾಗೂ ಸಂಗೀತ ಕಾರ್ಯಕ್ರಮ ನಡೆದವು. ಉಭಯ ಗವಾಯಿಗಳಾದ ಪಂಚಾಕ್ಷರಿ ಹಾಗೂ ಪುಟ್ಟರಾಜ ಗವಾಯಿಗಳ ಕರ್ತೃ ಗದ್ದುಗೆ ಹಾಗೂ ಹಾನಗಲ್ ಕುಮಾರ ಮಹಾಶಿವಯೋಗಿಗಳ ಗದ್ದುಗೆಯನ್ನು ಹೂವುಗಳಿಂದ ಅಲಂಕರಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು.

ವರದಿ:ಮುತ್ತು ಗೋಸಲ 


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!