
ಸುರಕ್ಷಿತವಾಗಿ ಭೂಮಿ ತಲುಪಿದ ಶುಭಾಂಶು ಶುಕ್ಲಾ ಟೀಮ್.
ಕೋಟಿ ಕೋಟಿ ಭಾರತೀಯರ ಪ್ರಾರ್ಥನೆ ಫಲಿಸಿದೆ.
ನವದೆಹಲಿ:ಸತ್ಯಮಿಥ್ಯ (ಜು-15)
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಬಂದು ತಲುಪಿದ್ದಾರೆ.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳ ವಾಸ್ತವ್ಯದ ನಂತರ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಇಂದು ಭೂಮಿಗೆ ಬಂದಿಳಿದಿರುವದು ಅದ್ಭುತ ಸಾಧನೆಯಾಗಿದ್ದು ಮನುಕುಲಕ್ಕೆ ಸಹಕಾರಿಯಾಗಲಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸೋಮವಾರ ಸಂಜೆ ಭೂಮಿಗೆ ಮರು ಪ್ರಯಾಣ ಆರಂಭಿಸಿದ್ದರು. ಒಟ್ಟು 22.5 ಗಂಟೆಗಳ ಕಾಲ ಪ್ರಯಾಣ ಬೆಳೆಸಿ ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಗೆ ಗಗನ ಯಾತ್ರಿಗಳು ಬಂದಿಳಿದಿದ್ದಾರೆ.
ಜೂ.25ರಂದು ಆಕ್ಸಿಯಂ-4 ಮಿಷನ್ ಮೂಲಕ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್ಸ್ಕಿ ಅಂತರಿಕ್ಷ ಯಾನಕ್ಕೆ ತೆರಳಿದ್ದರು.
18 ದಿನದ 60 ಪ್ರಯೋಗಗಳನ್ನು ಮಾಡಲಾಗಿದೆ. ಶುಭಾಂಶು ಶುಕ್ಲಾ 7 ಪ್ರಯೋಗಗಳನ್ನು ಮಾಡಿದ್ದಾರೆ ಎನ್ನಲಾಗುತ್ತಿದೆ.
ವರದಿ: ಸಂ.