
ಬಸವ ಸಂಸ್ಕೃತಿ ಅಭಿಯಾನ ಪ್ರಯುಕ್ತ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಸುದ್ದಿಗೋಷ್ಠಿ.

ಗಜೇಂದ್ರಗಡ: ಸತ್ಯಮಿತ್ಯ ( ಸೆ-06).
ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಕರ್ನಾಟಕ ರಾಜ್ಯ ಘೋಷಣೆ ಮಾಡಿ ಒಂದು ವರ್ಷವಾಗುತ್ತಿರುವ ಸಂದರ್ಭದಲ್ಲಿ. ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ,ಶರಣ ಸಾಹಿತ್ಯ ಪರಿಷತ್ತು, ರಾಷ್ಟ್ರೀಯ ಬಸವದಳ, ಬಸವ ಕೇಂದ್ರ, ಕದಳಿ ಮಹಿಳಾ ವೇದಿಕೆ,ಕನ್ನಡ ಸಾಹಿತ್ಯ ಪರಿಷತ್ ಮತ್ತು ಬಸವಪರ ಸಂಘಟನೆಗಳ ಸಹಯೋಗದಲ್ಲಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಸೆಪ್ಟಂಬರ್ 1 ರಿಂದ ಅಕ್ಟೋಬರ್ 1 ರವರೆಗೆ ” ಬಸವ ಸಂಸ್ಕೃತಿ ಅಭಿಯಾನದ” ಮೂಲಕ ಸಂಭ್ರಮಾಚರಣೆ ಆಚರಿಸಲಾಗುತ್ತಿದೆ. ಈ ಕುರಿತು ಜೇಂದ್ರಗಡ ನಗರದ ರೋಣ ರಸ್ತೆಯಲ್ಲಿರುವ ತೋಂಟದಾರ್ಯ ಇಂಗ್ಲೀಷ್ ಮಾಧ್ಯಮ ಶಾಲೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಸುದ್ದಿಗೋಷ್ಠಿ ಕರೆಯಲಾಗಿತ್ತು.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜಾಗತಿಕ ಲಿಂಗಾಯತ ಮಹಾಸಭಾ ಗಜೇಂದ್ರಗಡ ತಾಲೂಕ ಪ್ರಧಾನ ಕಾರ್ಯದರ್ಶಿ ಬಸವರಾಜ ಅಂಗಡಿ. ಬಸವ ಸಂಸ್ಕೃತಿ ಅಭಿಯಾನದ ಜಾಥಾ ಗದಗ ಜಿಲ್ಲೆಗೆ ಸೆಪ್ಟಂಬರ್ 9ರಂದು ಆಗಮಿಸಲಿದ್ದು. ಗದುಗಿನ ತೋಟದ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆಗಸ್ಟ್ 21ರಿಂದ ಸಪ್ಟಂಬರ್ 4ರವರೆಗೆ ತಾಲೂಕಿನ 15 ಸರಕಾರಿ ಹಾಗೂ ಅನುದಾನಿತ ಮತ್ತು ಅನುದಾನ ರಹಿತ,ಪದವಿಪೂರ್ವ ಮತ್ತು ಪದವಿ ಮಹಾವಿದ್ಯಾಲಯಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಬಸವ ಸಂಸ್ಕೃತಿ ಅಭಿಯಾನದ ಉದ್ದೇಶ ಹಾಗೂ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಅನುಭವಿ ಉಪನ್ಯಾಸಕರಿಂದ ವಿಚಾರ ಸಂಕೀರ್ಣ ಸಂವಾದಗಳನ್ನು ಏರ್ಪಡಿಸಲಾಗಿತ್ತು. ಉಪನ್ಯಾಸಕರು, ಪ್ರಾಚಾರ್ಯರು, ಮುಖ್ಯೋಪಾಧ್ಯಾಯರು, ಬಸವ ಪರ ಸಂಘಟನೆಗಳು ಮತ್ತು ವಿದ್ಯಾರ್ಥಿಗಳಿಂದ ಬಹುತೇಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದೆ.
ಸೆಪ್ಟಂಬರ್ 9 ರಂದು ಗದಗ ಜಿಲ್ಲೆಯಲ್ಲಿ ನಡೆಯುವ ಬಸವ ಸಂಸ್ಕೃತಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಹಿಳೆಯರು ಶರಣ ಬಂಧುಗಳು ಭಾಗವಹಿಸಲು ಕೋರಿಕೊಂಡರು.
ಕಳಕಯ್ಯ ಸಾಲಿಮಠ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ಜಿಲ್ಲೆಯಲ್ಲಿ ಹಮ್ಮಿಕೊಂಡ ಬಗ್ಗೆ ವಿವರಣೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ತಾಲೂಕಾ ಅಧ್ಯಕ್ಷರು ಜಿ. ಸಿ. ಓದುಸುಮಠ,ಮೈಲಾರಪ್ಪ ಸೋಂಪುರ, ಯು. ಆರ್.ಚನ್ನಮ್ಮನವರ,ಅಂದಪ್ಪ ರೋಣದ,ಬಸವರಾಜ ಕೊಟಗಿ, ಸಾಗರ ವಾಲಿ,ಶರಣು ಪೂಜಾರ, ಶರಣು ಹಡಪದ,ಕಳಕಪ್ಪ ಪತಂಗರಾಯ,ಉಮೇಶ ಬೆನ್ನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವರದಿ : ಸುರೇಶ ಬಂಡಾರಿ.