ಬ್ರೈಟ್ ಬಿಗಿನಿಂಗ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ
ಮಕ್ಕಳಲ್ಲಿ ಸಂತೋಷ, ಆತ್ಮವಿಶ್ವಾಸ ಮತ್ತು ಒಗ್ಗಟ್ಟಿನ ಮನೋಭಾವವನ್ನು ಹೆಚ್ಚಿಸುವುದು ಮಕ್ಕಳ ದಿನಾಚರಣೆ : ನಾಜೀಯಾ ಮುದಗಲ್ಲ.

ಬ್ರೈಟ್ ಬಿಗಿನಿಂಗ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ಮಕ್ಕಳಲ್ಲಿ ಸಂತೋಷ, ಆತ್ಮವಿಶ್ವಾಸ ಮತ್ತು ಒಗ್ಗಟ್ಟಿನ ಮನೋಭಾವವನ್ನು ಹೆಚ್ಚಿಸುವುದು ಮಕ್ಕಳ ದಿನಾಚರಣೆ : ನಾಜೀಯಾ ಮುದಗಲ್ಲ.
ಗಜೇಂದ್ರಗಡ: ಸತ್ಯಮಿಥ್ಯ (ನ-15)
ನಗರದ ಬ್ರೈಟ್ ಬಿಗಿನಿಂಗ್ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಶುಕ್ರವಾರ ಹರ್ಷೋಲ್ಲಾಸದಿಂದ ಆಚರಿಸಲಾಯಿತು. ಮಕ್ಕಳ ಚಟುವಟಿಕೆಗಳಿಂದ ಶಾಲೆಯ ಆವರಣವೇ ಕಂಗೊಳಿಸಿತು.

ಕಾರ್ಯಕ್ರಮವನ್ನು ಶಾಲೆಯ ಚೇರ್ಮನ್ ಸೀತಲ ಓಲೇಕಾರ ಉದ್ಘಾಟಿಸಿದರು. ಕಾರ್ಯಕ್ರಮದ ಆರಂಭದಲ್ಲಿ ದೀಪ ಬೆಳಗಿಸಿ ಜವಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪೂಷ್ಪಾರ್ಚನೆ ಮಾಡಲಾಯಿತು. ನಂತರ ಮಾತನಾಡಿದ ಅವರು ಶಿಕ್ಷಕರು ಮಕ್ಕಳಿಗೆ ಸಮರ್ಪಿತವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಮಕ್ಕಳು ನೃತ್ಯ, ನಾಟಕ, ಗುಂಪುಗಾನ, ಕವಿತಾ ಪಠಣ, ಚಿತ್ರಕಲೆ ಪ್ರದರ್ಶನ ಮುಂತಾದ ಹಲವು ಕಾರ್ಯಕ್ರಮಗಳಲ್ಲಿ ತಮ್ಮ ಅದ್ಭುತ ಪ್ರತಿಭೆಯನ್ನು ಪ್ರದರ್ಶಿಸಿದರು. ಮಕ್ಕಳಿಗೆ ಹೊಸ ಅನುಭವ ನೀಡುವ ಉದ್ದೇಶದಿಂದ ಶಿಕ್ಷಕರು ವಿಶೇಷವಾಗಿ ಹಾಸ್ಯನಾಟಕ ಮತ್ತು ಆಟೋಟಗಳನ್ನು ಕೂಡ ಹಮ್ಮಿಕೊಂಡಿದ್ದರು.
ಬಳಿಕ ಶಾಲೆಯ ಪ್ರಾಂಶುಪಾಲರಾದ ನಾಜೀಯಾ ಮುದಗಲ್ಲ ಮಾತನಾಡಿ ಮಕ್ಕಳಲ್ಲಿ ಸೃಜನಶೀಲತೆ, ಧೈರ್ಯ ಮತ್ತು ಮೌಲ್ಯಾಧಾರಿತ ಶಿಕ್ಷಣ ಬೆಳೆಸುವುದು ನಮ್ಮ ಗುರಿ ಎಂದರು.
ಇದೇ ಸಂದರ್ಭದಲ್ಲಿ ಶಿಕ್ಷಕಿ ಅನುಷಾ ತಳವಾರ, ಕಿರಣ ನಿಡಗುಂದಿ, ಪರಿಚಾರಕಿಯರಾದ ಅಂಜುಮ, ಮಂಜುಳಾ ಸುಂಕದ ಸೇರಿದಂತೆ ಮುದ್ದು ಮಕ್ಕಳು ಇದ್ದರು.
ವರದಿ : ಸುರೇಶ ಬಂಡಾರಿ.




