
ಆಳುವ ಸರ್ಕಾರಗಳು ಶೈಕ್ಷಣಿಕ ಕ್ಷೇತ್ರಕ್ಕೆ ಬಹಳಷ್ಟು ಮಹತ್ವ ನೀಡಬೇಕು – ಮುರ್ತುಜಾ ಡಾಲಯತ್.

ಗಜೇಂದ್ರಗಡ:ಸತ್ಯಮಿಥ್ಯ (ನ -16).
ಆಳುವ ಸರ್ಕಾರಗಳು ಶೈಕ್ಷಣಿಕ ಕ್ಷೇತ್ರಕ್ಕೆ ಬಹಳಷ್ಟು ಮಹತ್ವ ನೀಡಬೇಕು. ದಿನಬೆಳಗಾದರೆ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಸುದ್ದಿಗಳನ್ನು ಕೇಳುತ್ತಿದ್ದೇವೆ ಖೇದಕರ ವಿಷಯ. ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಬೇಕು ಎಂದು ಪುರಸಭೆ ಸದಸ್ಯ ಮುರ್ತುಜಾ ಡಾಲಯತ್ ನುಡಿದರು.

ಅವರು ನಗರದ ಸರಕಾರಿ ಮಾದರಿ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಮತ್ತು ಪೋಷಕರ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡುತ್ತ. ಖಾಸಗಿ ಶಾಲೆಗಳ ಪೈಪೋಟಿಯ ನಡುವೆ ನಮ್ಮ ಕೆಜಿಎಮ್ಎಸ್ ಶಾಲೆ 470 ವಿದ್ಯಾರ್ಥಿಗಳನ್ನು ಹೊಂದುವ ಮೂಲಕ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನದಲ್ಲಿರುವದು ಹೆಮ್ಮೆಯ ವಿಷಯ. ಈ ಗುರಿ ಸಾಧನೆಯಲಿ ಶಾಲೆಯ ಶಿಕ್ಷಕರ, ಎಸ್ ಡಿ ಎಮ್ ಸಿ ಸದಸ್ಯರ ಮತ್ತು ಪಾಲಕರ ಪಾತ್ರ ಮುಖ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪನ್ಯಾಸ ನೀಡಿದ ರೂಪಾ ಪಟ್ಟಣಶಟ್ಟರ. ಮಕ್ಕಳ ಶೈಕ್ಷಣಿಕ ಮಟ್ಟ ಅಭಿವೃದ್ಧಿ ಹೊಂದಲು ಶಿಕ್ಷಕರ ಜೊತೆಗೆ ಪೋಷಕರ ಪಾತ್ರ ಬಹುಮುಖ್ಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ಬಸವರಾಜ ಹೀರೆಮಠ ವಹಿಸಿದ್ದರು.
ಈ ಸಂದರ್ಭದಲ್ಲಿ ಶರಣಯ್ಯ ಮಠದ, ಕಳಕಪ್ಪ ರಾಠೋಡ, ಪೀರು ರಾಠೋಡ,ಮಹಿಬೂಬ ಚಿನ್ನೂರು ಸೇರಿದಂತೆ ಅನೇಕರು ಇದ್ದರು.
ವರದಿ : ಸುರೇಶ ಬಂಡಾರಿ.




