ಬೂತ್ ಮಟ್ಟಕ್ಕೆ ಕೇಂದ್ರದ ಜನಪರ ಯೋಜನೆ ತಲುಪಿಸಿ: ಉಮೇಶ್ ಮಲ್ಲಾಪುರ

ಗಜೇಂದ್ರಗಡ:ಸತ್ಯಮಿಥ್ಯ (ಜೂ – 28)
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಬಡವರು, ದೀನ-ದಲಿತರು, ರೈತರು ಹಾಗೂ ಮಹಿಳೆಯರ ಪರವಾದ ಜನಪರ ಯೋಜನೆಗಳನ್ನು ಪ್ರತಿ ಬೂತ್ ಮಟ್ಟಕ್ಕೆ ತಲುಪಿಸುವ ಮೂಲಕ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕೆಂದು ಬಿಜೆಪಿ ರೋಣ ಮಂಡಲ ಅಧ್ಯಕ್ಷ ಉಮೇಶ್ ಮಲ್ಲಾಪುರ ಕರೆ ನೀಡಿದರು.

ಪಟ್ಟಣದ ಮಾಜಿ ಸಚಿವ ಕಳಕಪ್ಪ ಜಿ. ಬಂಡಿ ಅವರ ಗೃಹ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಎಸ್ಟಿ ಮೋರ್ಚಾ ಹಾಗೂ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪಕ್ಷದ ತತ್ವ, ಸಿದ್ಧಾಂತ ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬ ಪದಾಧಿಕಾರಿಯ ಕರ್ತವ್ಯವಾಗಿದೆ . ಕಾರ್ಯಕರ್ತರು ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬೂತ್ ಮಟ್ಟದಲ್ಲಿ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಹಿರಿಯ ಮುಖಂಡ ಬಿ.ಎಂ. ಸಜ್ಜನರ, ರಾಜ್ಯ ಎಸ್ಟಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಹನುಮಂತಪ್ಪ ಹಟ್ಟಿಮನಿ, ಯುವ ಮುಖಂಡ ಕರಣ್ ಬಂಡಿ, ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಯಲ್ಲಪ್ಪ ಅಡ್ನೂರ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ವಕ್ಕರ್ ಹಾಗೂ ಬಾಲಾಜಿ ಭೋಸಲೇ, ಎಸ್ಟಿ ಮೋರ್ಚಾ ಅಧ್ಯಕ್ಷ ಸಂತೋಷ್ ಕಡಿವಾಲ, ಯುವ ಮೋರ್ಚಾ ಅಧ್ಯಕ್ಷ ಹುಲ್ಲಪ್ಪ ಕೆಂಗಾರ್, ಶಿವಪ್ಪ ಬಿಡ್ನಾಳ ಸೇರಿದಂತೆ ಎಸ್ಟಿ ಮೋರ್ಚಾ ಮತ್ತು ಯುವ ಮೋರ್ಚಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ಸುರೇಶ ಬಂಡಾರಿ.




