ಟ್ರೆಂಡಿಂಗ್ ಸುದ್ದಿಗಳು

ವಿಬಿ ಜಿ ರಾಮ್ ಜಿ: 125 ದಿನ ಉದ್ಯೋಗ ಭರವಸೆ, ಕೂಲಿ ಮೊತ್ತ 382ಕ್ಕೆ ಹೆಚ್ಚಳ – ದೇಶಪಾಂಡೆ

Share News

ವಿಬಿ ಜಿ ರಾಮ್ ಜಿ: 125 ದಿನ ಉದ್ಯೋಗ ಭರವಸೆ, ಕೂಲಿ ಮೊತ್ತ 382ಕ್ಕೆ ಹೆಚ್ಚಳ – ದೇಶಪಾಂಡೆ

Oplus_131072

ಹುನಗುಂದ : ಸತ್ಯಮಿಥ್ಯ (ಜು -04)

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕಾ ಮಿಷನ್‌ ಗ್ರಾಮೀಣ (ವಿಬಿ-ಜಿ ರಾಮ್-ಜಿ) ಯೋಜನೆಯು ಜುಲೈ 1ರಿಂದ ಜಾರಿಗೆ ಬಂದಿದ್ದು, ತಾಲ್ಲೂಕಿನ 19 ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆಯನ್ನ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ ತಿಳಿಸಿದ್ದಾರೆ.

ಇನ್ನು ಕೂಲಿ ದರವನ್ನು 370ರಿಂದ 382ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೆ, ಪ್ರಸ್ತುತ ಇರುವ 100 ದಿನಗಳ ಉದ್ಯೋಗವನ್ನು 125 ದಿನಗಳಿಗೆ ವಿಸ್ತರಿಸಲಾಗಿದೆ ಎಂದು ಅವರು ಹೇಳಿದರು.

ಈ ಯೋಜನೆಯಡಿ ಕೆರೆ, ಕಾಲುವೆ, ರಸ್ತೆ, ಶಾಲಾ ಆವರಣ, ಅಂಗನವಾಡಿ ಸೇರಿದಂತೆ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತದೆ. ಈ ಕಾಮಗಾರಿಗಳ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದ್ದು, ಜನರ ಜೀವನಮಟ್ಟ ಸುಧಾರಣೆಗೆ ನೆರವಾಗಲಿದೆ ಎಂದು ತಿಳಿಸಿದರು.

ಕೇವಲ ಉದ್ಯೋಗ ನೀಡುವುದಲ್ಲದೆ, ಕೆರೆ, ಕಾಲುವೆ, ರಸ್ತೆ, ಶಾಲಾ ಆವರಣ ಗೋಡೆ ಮುಂತಾದ ಗ್ರಾಮದ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಈ ಯೋಜನೆಯಡಿ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಗಳು, ಸಂಬಂಧಿತ ಇಲಾಖೆಗಳು ಹಾಗೂ ಸಾರ್ವಜನಿಕರು ಯೋಜನೆಯ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!