
ಶಾಸಕ ಜಿ.ಎಸ್.ಪಾಟೀಲರಿಗೆ ಸಚಿವ ಸ್ಥಾನ ನೀಡಿ ನ್ಯಾಯವಾದಿ ಆರ್.ಎಮ್.ರಾಯಬಾಗಿ ಆಗ್ರಹ.

ಗಜೇಂದ್ರಗಡ:ಸತ್ಯಮಿಥ್ಯ (ಜು -04)
ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಎರಡನೇ ಅವಧಿಯಲ್ಲಿ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕೆಂದು ಎಸ್.ಎಸ್.ಕೆ. ಸಮಾಜದ ಮುಖಂಡ ಹಾಗೂ ನ್ಯಾಯವಾದಿ ಆರ್ .ಎಂ. ರಾಯಬಾಗಿ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರೋಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಾಸಕ ಜಿ.ಎಸ್. ಪಾಟೀಲ ಅವರು ನಿರಂತರವಾಗಿ ಶ್ರಮಿಸುತ್ತಿದ್ದು, ಜನಪರ ಹಾಗೂ ಅಭಿವೃದ್ಧಿ ಪರ ಕಾರ್ಯಗಳ ಮೂಲಕ ಕ್ಷೇತ್ರದ ಜನರ ವಿಶ್ವಾಸ ಗಳಿಸಿದ್ದಾರೆ. ವಿಧಾನಸಭೆಯಲ್ಲಿ ಕ್ಷೇತ್ರದ ಸಮಸ್ಯೆಗಳನ್ನು ಸಮರ್ಥವಾಗಿ ಪ್ರಸ್ತಾಪಿಸುವ ಮೂಲಕ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕ ಭಾಗಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಈ ಬಾರಿ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತವಾಗಿದೆ. ಅವರ ಆಡಳಿತ ಅನುಭವ, ಸಂಘಟನಾ ಚಾತುರ್ಯ ಹಾಗೂ ಜನಸೇವೆಯ ಬದ್ಧತೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸಚಿವ ಸಂಪುಟದಲ್ಲಿ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.
ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ದೊರೆತರೆ ರೋಣ ಕ್ಷೇತ್ರ ಸೇರಿದಂತೆ ಗದಗ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ವೇಗ ಸಿಗಲಿದ್ದು, ಜನರ ಬಹುಕಾಲದ ನಿರೀಕ್ಷೆಯೂ ಈಡೇರುತ್ತದೆ. ಆದ್ದರಿಂದ ಪಕ್ಷದ ವರಿಷ್ಠರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಉತ್ತರ ಕರ್ನಾಟಕದ ಜನರ ಆಶಯವನ್ನು ಈಡೇರಿಸಬೇಕು ಎಂದು ಎಸ್.ಎಸ್.ಕೆ.ಸಮಾಜದ ಮುಖಂಡ ಹಾಗೂ ನ್ಯಾಯವಾದಿ ಆರ್.ಎಂ. ರಾಯಬಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಸುರೇಶ ಬಂಡಾರಿ.



