
ಗ್ರಾಮ ಸಹಾಯಕರಿಗೆ ₹10 ಲಕ್ಷ ಇಡುಗಂಟು/ ಸಚಿವ ಸಂಪುಟ ಒಪ್ಪಿಗೆ:ಎಚ್ ಕೆ ಪಾಟೀಲರಿಗೆ ಸನ್ಮಾನ.

ಗದಗ /ಸತ್ಯಮಿಥ್ಯ (ಸೆ-27).
ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಸೇವೆಯಿಂದ ನಿವೃತ್ತಿ ಹೊಂದಿದ ನಂತರ ಅಥವಾ ಸೇವೆಯಲ್ಲಿರುವಾಗಲೇ ಮೃತರಾದರೆ ₹10 ಲಕ್ಷಗಳ ಇಡುಗಂಟು ನೀಡಲು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿರುವುದರಿಂದ ಇಂದು ಕಾನೂನು ಸಚಿವ ಎಚ್, ಕೆ ಪಾಟೀಲ್ ಅವರಿಗೆ ಗದಗ ಜಿಲ್ಲಾ ಗ್ರಾಮ ಸಹಾಯಕರ ಸಂಘದ ಜಿಲ್ಲಾಧ್ಯಕ್ಷರಾದ ಅಬ್ದುಲ್ ರೆಹಮಾನ್ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ನಂತರ ಮಾತನಾಡಿದ ಜಿಲ್ಲಾಧ್ಯಕ್ಷ ಅಬ್ದುಲ್ ರೆಹಮಾನ.ಸೇವೆಯನ್ನು ಗ್ರೂಪ್ ‘ಡಿ’ ಹುದ್ದೆಯಲ್ಲಿ ಸಕ್ರಮಗೊಳಿಸುವುದು ಅಥವಾ ಗೌರವ ಧನವನ್ನು ₹15,000 ದಿಂದ ₹27,000ಕ್ಕೆ ಹೆಚ್ಚಿಸುವುದು, ಇವೆರಡಲ್ಲಿ ಒಂದು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲು ಸಭೆಯಲ್ಲಿ ತೀರ್ಮಾನಿಸಿದರ ಬಗ್ಗೆ ಸಂಘದಿಂದ ಚರ್ಚಿಸಿ ಅಭಿಪ್ರಾಯ ಸಂಗ್ರಹದಿಂದ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಗ್ರಾಮ ಸಹಾಯಕರು ಸೇವೆಯಿಂದ ನಿವೃತ್ತಿ ಹೊಂದಿದ ನಂತರ ಅಥವಾ ಸೇವೆಯಲ್ಲಿರುವಾಗಲೇ ಮೃತರಾದರೆ ₹10 ಲಕ್ಷಗಳ ಇಡುಗಂಟು ನೀಡಲು ಒಪ್ಪಿಗೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಎಚ್ ಕೆ ಪಾಟೀಲ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರಿಗೆ ಸಂಘದ ವತಿಯಿಂದ ಕೃತಜ್ಞತೆಗಳನ್ನು ಜಿಲ್ಲಾ ಗ್ರಾಮ ಸಹಾಯಕರ ಸಂಘದ ಜಿಲ್ಲಾಧ್ಯಕ್ಷರಾದ ಅಬ್ದುಲ್ ರೆಹಮಾನ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ವರದಿ : ಮುತ್ತು ಗೋಸಲ.