ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸಾಂಸ್ಕೃತಿಕ ವಿಭಾಗದ ಸ್ಪರ್ಧೆಯಲ್ಲಿ ಸಾಧನೆ.

ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸಾಂಸ್ಕೃತಿಕ ವಿಭಾಗದ ಸ್ಪರ್ಧೆಯಲ್ಲಿ ಸಾಧನೆ.
ಗಜೇಂದ್ರಗಡ:ಸತ್ಯಮಿಥ್ಯ (ಜ -09)
ಪಟ್ಟಣದ ಪುರ್ತಿಗೇರಿ ಕ್ರಾಸ್ ಬಳಿ ಇರುವ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ತುಮಕೂರು ಜಿಲ್ಲೆ ಜಿಲ್ಲಾ ಪ್ರಾಚಾರ್ಯರ ಸಂಘ ತುಮಕೂರು ಜಿಲ್ಲೆ ಇವರ ಸಹಯೋಗದಲ್ಲಿ ತುಮಕೂರು ಜಿಲ್ಲೆಯಲ್ಲಿ ಜರುಗಿದ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಜಯಶಾಲಿಯಾಗಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಸಾಂಸ್ಕೃತಿಕ ವಿಭಾಗದ ಆಂಗ್ಲ ಮಾದ್ಯಮ ಚರ್ಚಾ ಸ್ಪರ್ಧೆಯಲ್ಲಿ ನಮೃತಾ ಪಾಟೀಲ ವಿದ್ಯಾರ್ಥಿನಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ.
ಸಾಂಸ್ಕೃತಿಕ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಐಶ್ವರ್ಯ ಯತ್ನಟ್ಟಿ ವಿದ್ಯಾರ್ಥಿನಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾಳೆ.
ಸಾಂಸ್ಕೃತಿಕ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀಕಾಂತ ವಾಲೆಕಾರ ವಿದ್ಯಾರ್ಥಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಮ ನಿ.ಪ್ರ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಎಸ್ ಎ ವಿ ವಿ ಪಿ ಸಮಿತಿ ನರೇಗಲ್ಲ ಆಡಳಿತಾಧಿಕಾರಿ ಗಳಾದ ಎನ್ ಆರ್ ಗೌಡರ. ಪ್ರಧಾನ ಕಾರ್ಯದರ್ಶಿಗಳಾದ ಆರ್ ಜೆ ದೊಡ್ಡಮೇಟಿ ಹಾಗೂ ಕಾಲೇಜಿನ ಚೆರಮನ್ನರಾದ ವಿರಯ್ಯ ವಿ ವಸ್ತ್ರದ ಹಾಗೂ ಸದಸ್ಯರಾದ ಡಾ.ಬಿ ವಿ ಕಂಬಳ್ಯಾಳ, ಸದಾಶಿವ ಕರಡಿ,ಮುದಕಪ್ಪ ತೊಂಡಿಹಾಳ.ಪ್ರಾಚಾರ್ಯರಾದ ಶ್ರೀ ವಸಂತರಾವ್ ಗಾರಗಿ ಹಾಗೂ ಸರ್ವ ಸಿಬ್ಬಂದಿಗಳು ಶುಭಾಶಯಗಳು ಹೇಳಿದ್ದಾರೆ.
ವರದಿ : ಮುತ್ತು ಗೋಸಲ.