ಕಳಪೆ ಕಾಮಗಾರಿ ನಡೆದ್ರೆ ಕ್ರಮ; ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಪೂರಕ ದಾಖಲೆ ಸಮೇತ ನನ್ನ ಗಮನಕ್ಕೆ ತನ್ನಿ ಕ್ರಮ ನಿಶ್ಚಿತ.

*ಕಳಪೆ ಕಾಮಗಾರಿ ನಡೆದ್ರೆ ಕ್ರಮ; ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
*ಪೂರಕ ದಾಖಲೆ ಸಮೇತ ನನ್ನ ಗಮನಕ್ಕೆ ತನ್ನಿ ಕ್ರಮ ನಿಶ್ಚಿತ.
ಕೊಪ್ಪಳ: ಸತ್ಯ ಮಿಥ್ಯ (ಜೂನ್ 24).
ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿ ತಾಲ್ಲೂಕಿನ ಮುಷ್ಟೂರು ಗ್ರಾಮ ಪಂಚಾಯತಿಗೆ ಸೋಮವಾರ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಭೇಟಿ ನೀಡಿ ಸಾರ್ವಜನಿಕರ ಕೊಂದು ಕೊರತೆ ಅಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಕಳಪೆ ಕಾಮಗಾರಿ ನಡೆದಿದ್ದರೆ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು.
ಈ ಸಂಬಂಧ ಪೂರಕ ದಾಖಲೆಗಳ ಸಮೇತ ನನ್ನ ಗಮನಕ್ಕೆ ತಂದರೆ ಕ್ರಮವಹಿಸುತ್ತೇನೆ ಎಂದರು. ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ ನಡೆದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಸಹಿಸಲು ಸಾಧ್ಯವಿಲ್ಲ. ಕಳೆದ ಕೆಡಿಪಿ ಸಭೆಯಲ್ಲಿ ಕೆಕೆಆರ್‌ಡಿಬಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಎಚ್ಚರಿಕೆ ಕೂಡ ನೀಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಪ್ರತಿಕ್ರಿಯಿಸಿದರು.
ಯಾವುದೇ ಕಾಮಗಾರಿ ಇದ್ದರೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಬೇಕು. ಯಾವುದೇ ಕಳಪೆ ಕಾಮಗಾರಿ ನಡೆದರೂ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಇದೀಗ ತಾವು ಹೇಳುತ್ತಿರುವ ಕಾಮಗಾರಿ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ, ಮುಖಂಡರಾದ ಬಸವರಾಜ್ ನೀರಗಂಟಿ, ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ವರದಿ : ಮಲ್ಲಿಕಾರ್ಜುನ ಹಿರೇಮಠ್.