
ಚಂದ್ರಶೇಖರ್ ಈಟಿ – ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಗರಿ.
ವಿಜಯಪುರ : ಸತ್ಯಮಿಥ್ಯ (ಜ -25).
ಶಾಲೆಯ ಮಕ್ಕಳ ಭವಿಷ್ಯವನ್ನು ರೂಪಿಸಲು ಶಿಕ್ಷಕರು ಹಲವಾರು ಹೊಸ ಹೊಸ ಬೋಧನಾ ಕೌಶಲ್ಯಗಳನ್ನು ಹಾಗೂ ಪ್ರಯೋಗಗಳನ್ನು ಬಳಸಿ ಬೋಧನೆ ಮಾಡುವುದರ ಮೂಲಕ ಶಾಲೆಯ ಮಕ್ಕಳ ಭವಿಷ್ಯವನ್ನು ರೂಪಿಸಲು ಶಿಕ್ಷಕ ವೃತ್ತಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮಕ್ಕಳ ಭವಿಷ್ಯವನ್ನು ರೂಪಿಸುವುದು ಒಬ್ಬ ಉತ್ತಮ ಶಿಕ್ಷಕನಿಂದ ಸಾಧ್ಯವಾಗುತ್ತದೆ.
ಅಂತಹ ಶಿಕ್ಷಕರಲ್ಲಿ ಒಬ್ಬರಾಗಿರುವ ವಿಜಯಪುರ ಜಿಲ್ಲೆಯ ಸಿದ್ದಾರ್ಥ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಚಂದ್ರಶೇಖರ್ ಈಟಿ ಅವರಿಗೆ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕ ಪಡೆರೆಷನ (ರಿ) ನವದೆಹೆಲಿ
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ವಿಜಯಪುರ ಅವರ ಸಂಯೋಗದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿ ಉತ್ತಮ ಶಿಕ್ಷಕ ಪ್ರಶಸ್ತಿಯ ಪ್ರಧಾನ ಸಮಾರಂಭವನ್ನು ವಿಜಯಪುರ ಜಿಲ್ಲೆಯ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಸಮಾರಂಭವು ಜರುಗಲಿದೆ.
ಕಳೆದ 15 ವರ್ಷಗಳಿಂದ ಶಿಕ್ಷಣ ಸಂಸ್ಥೆಯಲ್ಲಿ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿದ್ದು ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಹಲವಾರು ಹೊಸ ಹೊಸ ಬೋಧನಾ ಕೌಶಲ್ಯಗಳನ್ನು ಬಳಸುವುದರ ಮೂಲಕ ಮಕ್ಕಳಿಗೆ ಶಿಕ್ಷಣವನ್ನು ಮನದಟ್ಟಾಗುವಂತೆ ಮಾಡುವಲ್ಲಿ ತಮ್ಮ ಕಾರ್ಯವನ್ನು ನಿರ್ವಹಿಸಿದ್ದು ಉತ್ತಮ ಶಿಕ್ಷಕ ಪ್ರಶಸ್ತಿ ಬಂದಿರುವುದು ನನಗೆ ಹರ್ಷ ತಂದಿದೆ ಎಂದು ಹೇಳಿದ್ದಾರೆ.
ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದ ಎಲ್ಲಾ ತೀರ್ಪುಗಾರರಿಗೂ ನಾನು ಚಿರಋಣಿಯಾಗಿರುತ್ತೇನೆ ಈ ಪ್ರಶಸ್ತಿಯಿಂದಾಗಿ ನನಗೆ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಕೆಲಸ ಮಾಡಲು ಬಲ ಬಂದಂತಾಗಿದ್ದು ಮಕ್ಕಳ ಕಲಿಕೆಯಲ್ಲಿ ಇನ್ನೂ ವಿನೂತನವಾದಂತಹ ಭೋದನಾ ಕೌಶಲ್ಯಗಳನ್ನು ಬಳಸಿ ಶಾಲಾ ಮಕ್ಕಳ ಭವಿಷ್ಯವನ್ನು ರೂಪಿಸಲು ಪ್ರಯತ್ನಿಸುತ್ತೆನೆ.
– ಉತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆಯಾದ ಶಿಕ್ಷಕರು ಚಂದ್ರಶೇಖರ್ ಈಟಿ