
ಕುಮಾರೇಶ್ವರ ವಾಣಿಜ್ಯ ಪದವಿ ಕಾಲೇಜಿನಲ್ಲಿ “ಸುಕುಮಾರ 2024” ಸಾಂಘಿಕ ಸಮಾರೋಪ
ಗಜೇಂದ್ರಗಡ: ಸತ್ಯ ಮಿಥ್ಯ (ಜುಲೈ -16)
ನಗರದ ಪುರ್ತಗೇರಿ ಕ್ರಾಸ್ ಬಳಿ ಇರುವ ಶ್ರೀ ಕುಮಾರೇಶ್ವರ ವಾಣಿಜ್ಯ ಪದವಿ ಕಾಲೇಜಿನಲ್ಲಿ 2023-24 ನೇಯ ಸಾಲಿನ ವಿವಿಧ ಸಾಂಘಿಕ ಚಟುವಟಿಕೆಗಳ ಸಮಾರೂಪ ಸಮಾರಂಭ “ಸುಕುಮಾರ 2024” ಕಾರ್ಯಕ್ರಮವನ್ನು ಮಂಗಳವಾರ ದಿನ ನಡೆಯಿತು .
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ. ಮ. ನಿ. ಪ್ರ. ಸ್ವ.ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಮಾತನಾಡುತ್ತ. ಯುವಪೀಳಿಗೆ ವ್ಯಸನ ಮುಕ್ತರಾಗಬೇಕು. ಓದುವ ಹವ್ಯಾಸ ಬೆಳೆಸಿಕೊಳ್ಳಿ. ಒಳ್ಳೆಯ ವಿದ್ಯಾರ್ಥಿಗಳಾಗುವದು ಹೇಗೆ ಎಂಬುವದನ್ನು ಕಥೆಯನ್ನು ಹೇಳುವ ಮೂಲಕ ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ಹೇಗೆ ದಾರಿ ತಪ್ಪುತ್ತಾರೆ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ಏನನ್ನು ಮಾಡಬೇಕು ಎಂದು ವಿದ್ಯಾರ್ಥಿಗಳ ಮನಸೆಳೆಯುವಂತೆ ಆಶೀರ್ವಚನ ನೀಡಿದರು.
ಈ ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಬಸಯ್ಯ ಹಿರೇಮಠ ಮಾತನಾಡಿ ಗಜೇಂದ್ರಗಡ ತಾಲೂಕಿನಲ್ಲಿ ನಮ್ಮ ಕಾಲೇಜಿನಲ್ಲಿ ಶೇಕಡಾ 99% ರಷ್ಟು ವಿದ್ಯಾರ್ಥಿಗಳು ಪಾಸಾಗುವದಲ್ಲದೆ ಅತಿ ಹೆಚ್ಚು ಅಂಕ ಪಡೆದದ್ದು ನಮ್ಮ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ . ನಮ್ಮಲ್ಲಿ ಉತ್ತಮ ಗುಣಮಟ್ಟದ ಶಿಕ್ಷಕರಿದ್ದು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವ ಮೂಲಕ ಕಾಲೇಜಿನ ಏಳಿಗೆಗೆ ನಮ್ಮ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದರು.
ಈ ವೇಳೆ ಕಳೆದ ಬಾರಿ ಅತಿ ಹೆಚ್ಚು ಫಲಿತಾಂಶದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರಿಗೆ ಶ್ರೀಗಳು ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಅಧ್ಯಕ್ಷರಾದ ಎಸ್ ಎಸ್ ಪಟೇದ, ಎನ್ ಆರ್ ಗೌಡರ ಶಿವಾನಂದ ಮಠದ, ಎಸ್.ಕೆ .ರೇವಡಿ, ಎಂ.ಪಿ. ಪಾಟೀಲ್, ಪಿ.ಎನ್.ಚವಡಿ, ಎಸ್. ಸಿ.ಚಕ್ಕಡಿಮಠ, ಎ.ಪಿ. ಗಾಣಿಗೇರ, ವಸಂತರಾವ ಗಾರಗಿ, ಮಂಜುನಾಥ್ ಕಾಡದ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ ಬಳಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ : ಸುರೇಶ ಬಂಡಾರಿ.