ಜಿಲ್ಲಾ ಸುದ್ದಿ

ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಆರೋಪ.

Share News

ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಆರೋಪ.

 

ಗದಗ:ಸತ್ಯಮಿಥ್ಯ (ಏ-09)

ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಕಾಮುಕ ಪೈಶಾಚಿಕ ಘಟನೆ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ಎ.9ರ ಬುಧವಾರ ವರದಿಯಾಗಿದೆ.

16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸುಮಾರು 55 ವರ್ಷದ ತಂದೆಯಿಂದ ಕಳೆದ 1 ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಈ ಘಟನೆ ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ತಂದೆ ರಮೇಶ್ ಮೇಲೆ‌ ಈಗ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 1 ವರ್ಷದಿಂದ ಮನೆಯಲ್ಲಿ ಯಾರು ಇಲ್ಲದ ವೇಳೆ ಅತ್ಯಾಚಾರ ನಡೆಸುತ್ತಿದ್ದ. ಅತ್ಯಾಚಾರ ನಂತರ ಯಾರಿಗೂ ಹೇಳದಂತೆ ಬೆದರಿಕೆ ಹಾಕುತ್ತಿದ್ದ. ಅಕಸ್ಮಾತ್ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಸಂತ್ರಸ್ತೆ ಬಾಲಕಿ ಆರೋಪಿಸಿದ್ದಾಳೆ.

ಸದ್ಯ ಆರೋಪಿ ತಂದೆ ರಮೇಶ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಡಿ.ಎನ್.ಎ ಪರೀಕ್ಷೆ ಒಳಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಜಿಲ್ಲೆಯ ‌ಮುಳಗುಂದ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ವರದಿ : ಮುತ್ತು ಗೋಸಲ್ 


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!