ಗಜೇಂದ್ರಗಡ : ಇಂದಿರಾ ಕ್ಯಾಂಟಿನ್ ಕಟ್ಟಡಕ್ಕೆ ಭೂಮಿ ಪೂಜೆ.
ಗಜೇಂದ್ರಗಡ:ಸತ್ಯಮಿಥ್ಯ(ಸ -23).
ಪುರಸಭೆ ವ್ಯಾಪ್ತಿಯ ಬಸ್ ನಿಲ್ದಾಣದಲ್ಲಿ ₹೮೭ ಲಕ್ಷ ವೆಚ್ಚದಲ್ಲಿ ಇಂದಿರಾ ಕ್ಯಾಂಟಿನ್ ಕಟ್ಟಡ ನಿರ್ಮಾಣಕ್ಕೆ ಶಾಸಕ ಜಿ ಎಸ್ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಜಿ. ಎಸ್. ಪಾಟೀಲ್. ದುಬಾರಿ ಯುಗದಲ್ಲಿ ಬಡವರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಸಾರ್ವಜನಿಕರ,ಕೂಲಿಕಾರ್ಮಿಕರ ಅನುಕೂಲಕ್ಕಾಗಿ ಕಡಿಮೆ ದರದಲ್ಲಿ ಜನ ಸಾಮಾನ್ಯರಿಗೆ ಉತ್ತಮ ಗುಣಮಟ್ಟದ ಆಹಾರ ಸಿಗಬೇಕೆಂಬ ಸದುದ್ದೇಶದಿಂದ ಸರ್ಕಾರ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಆರಂಭಿಸಿದೆ. ಪಟ್ಟಣದ ಜನರು ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ ಇರುವುದರಿಂದ ಸಾರ್ವಜನಿಕರು ಇಂದಿರಾ ಕ್ಯಾಂಟೀನ್ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಬರುವಂತ ದಿನಗಳಲ್ಲಿ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರ ಸಹಕಾರದಿಂದ ಮೂಲಭೂತ ಸೌಕರ್ಯ ಕಲ್ಪಿಸುವದರ ಜೊತೆ ವಿವಿಧ ಯೋಜನೆಗಳಿಗೆ ಹಂತ ಹಂತವಾಗಿ ಅನುದಾನ ನೀಡುವ ಮೂಲಕ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಪುರಸಭೆ ಅಧ್ಯಕ್ಷ ಸುಭಾಷ ಮ್ಯಾಗೇರಿ, ಉಪಾಧ್ಯಕ್ಷೆ ಸವಿತಾ ಶ್ರೀಧರ ಬಿದರಳ್ಳಿ, ರಾಜು ಸಾಂಗ್ಲಿಕರ್,ಮುರ್ತುಜಾ ಡಾಲಾಯತ, ವಿಜಯಾ ಮಳಗಿ, ದ್ರಾಕ್ಷಾಯಣಿ ಚೋಳಿನ,ಮಂಜುಳಾ ರೇವಡಿ, ಶರಣಪ್ಪ ಉಪ್ಪಿನಬೆಟಗೇರಿ, ವೆಂಕಟೇಶ ಮುದಗಲ್ , ಮುದಿಯಪ್ಪ ಮುಧೋಳ, ಪ್ರಶಾಂತ ರಾಠೋಡ, ದುರಗಪ್ಪ ಮುಧೋಳ, ಸಿದ್ದಪ್ಪ ಬಂಡಿ, ರಫೀಕ ತೋರಗಲ್,ಕನಕಪ್ಪ ಕಲ್ಲವಡ್ಡರ, ಅಂದಪ್ಪ ರಾಠೋಡ,ಯಲ್ಲಪ್ಪ ಬಂಕದ,ಸಿದ್ದು ಗೊಂಗಡಶೆಟ್ಟಿಮಠ ಸೇರಿದಂತೆ ಅನೇಕರು ಇದ್ದರು.
ವರದಿ : ಚನ್ನು. ಎಸ್.