ಗಜೇಂದ್ರಗಡ : ನಾಳೆ ಸಿಪಿಐ(ಎಂ) ಪಕ್ಷದ ಜಿಲ್ಲಾ ಸಮ್ಮೇಳನ
ಗಜೇಂದ್ರಗಡ: ಸತ್ಯಮಿಥ್ಯ (ಡಿ-7)
ಜಿಲ್ಲೆಯ ನೀರಾವರಿ ಯೋಜನೆಗಳ ಜಾರಿಗಾಗಿ, ಬಗರ್ ಹುಕಂ ಸಾಗುವಳಿ ರೈತರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಸಿಪಿಐಎಂ ಪಕ್ಷದ ಗದಗ ಜಿಲ್ಲಾ 1 ನೇ ಸಮ್ಮೇಳನವನ್ನು ಡಿ- 08 ರಂದು ರವಿವಾರ, ನಗರದ ಸೇವಲಾಲ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಉದ್ಘಾಟಕರಾಗಿ ಸಿಪಿಐಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕಾಮ್ರೇಡ್ ಜಿ.ನಾಗರಾಜ ಉದ್ಘಾಟಿಸಲಿದ್ದು ಮುಖ್ಯ ಅತಿಥಿಗಳಾಗಿ ಧಾರವಾಡ ಜಿಲ್ಲಾ ಕಾರ್ಯದರ್ಶಿ ಕಾಮ್ರೇಡ್ ಮಹೇಶ ಪತ್ತಾರ ಭಾಗವಹಿಸಲಿದ್ದು ಸಮ್ಮೇಳನದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಕಾರ್ಯದರ್ಶಿ ಎಂ ಎಸ್ ಹಡಪದ ವಹಿಸಿಲಿದ್ದಾರೆ.
ಜಿಲ್ಲಾ ಸಮಿತಿ ಸದಸ್ಯರಾದ ಎಫ್.ಎಫ್.ತೋಟದ, ಬಾಲು ರಾಠೋಡ, ಪೀರು ರಾಠೋಡ, ಮಹೇಶ ಹಿರೇಮಠ, ಶಾಖಾ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ, ಮೆಹಬೂಬ್ ಹವಾಲ್ದಾರ್, ಚೆನ್ನಪ್ಪ ಗುಗಲೋತ್ತರ, ಚಂದ್ರು ರಾಠೋಡ, ಶಿವಾಜಿ ಗಡ್ಡದ, ರೇಣಪ್ಪ ಕಲ್ಗುಡಿ, ಕರಿಯಮ್ಮ ಗುರಿಕಾರ, ನಜೀರ ಮಾಲ್ದಾರ ಸೇರಿದಂತೆ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾ ಸಮ್ಮೇಳನದಲ್ಲಿ ವಿವಿಧ ಶಾಖೆಯ 80 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಎಂದು ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಂ ಎಸ್ ಹಡಪದ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವರದಿ : ಚನ್ನು. ಎಸ್.