ರಾಜ್ಯಪಾಲ ಗೆಹ್ಲೋಟ್ ಕೇಂದ್ರ ಸರ್ಕಾರದ ಕೈಗೊಂಬೆ – ಶಾಸಕ ಜಿ. ಎಸ್. ಪಾಟೀಲ್.
ಗಜೇಂದ್ರಗಡ : ಸತ್ಯಮಿಥ್ಯ (ಅಗಸ್ಟ್ -27).
ಕರ್ನಾಟಕ ರಾಜ್ಯಪಾಲರಾದ ತಾವರಚಂದ ಗೆಹ್ಲೋಟ್ ರವರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ. ಇಂತಹ ರಾಜಕೀಯ ಪ್ರೇರಿತ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ರೋಣ ಶಾಸಕ ಜಿ. ಎಸ್. ಪಾಟೀಲ್ ನುಡಿದರು.
ಇಂದು ಗಜೇಂದ್ರಗಡ ನಗರದಲ್ಲಿ ಅಹಿಂದ ಮತ್ತು ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ. ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸುಕ್ಯೂಷನ್ ಗೆ ಅನುಮತಿ ನೀಡಿದ ಕ್ರಮವನ್ನು ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ಸಭೆಯಲ್ಲಿ ಮಾತನಾಡುತ್ತಾ.
ಬಿಜೆಪಿ ನಾಯಕರು ಸರ್ಕಾರಿ ಅಂಗ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು. 135 ಜನ ಶಾಸಕರ ಬೆಂಬಲ ಇರುವ ಸಿದ್ದರಾಮಯ್ಯ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಿದೆ.ಹಿಂದೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಜನಾರ್ಧನ ರೆಡ್ಡಿ ಕೋಟ್ಯಂತರ ರೂಪಾಯಿಯ ಗಣಿ ಲೂಟಿ ಮಾಡಿ ಸಿದ್ದರಾಮಯ್ಯನವರನ್ನು ತೊಡೆತಟ್ಟಿ ಕೆಟ್ಟರು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ವಿಜಯೇಂದ್ರ ಯಾವೆಲ್ಲ ಹಗರಣ ಮಾಡಿದರು, ಬಿಜೆಪಿ ನಾಯಕರ ವಿರುದ್ಧ ಎಷ್ಟೆಲ್ಲ ಕೇಸುಗಳಿವೆ ಅದನ್ನು ಅರ್ಥ ಮಾಡಿಕೊಳ್ಳಬೇಕು. ಪಂಚ ಗ್ಯಾರಂಟಿಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಜನಪ್ರಿಯರಾಗುತ್ತಿರುವ ಸಿದ್ದರಾಮಯ್ಯನವರ ಏಳಿಗೆ ಸಹಿಸದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕ್ಷುಲ್ಲಕ ರಾಜಕಾರಣ ಮಾಡುವ ಮೂಲಕ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳೆಯುವ ಕೆಲಸ ಮಾಡುತ್ತಿದ್ದಾರೆ. ಕೂಡಲೇ ರಾಜ್ಯಪಾಲರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದರು.
ಇದಕ್ಕೂ ಪೂರ್ವದಲ್ಲಿ ಎಪಿಎಂಸಿ ಆವರಣದಿಂದ ಹೊರಟ ನೂರಾರು ಕಾಂಗ್ರೇಸ್ ಕಾರ್ಯಕರ್ತರು ರಾಜ್ಯಪಾಲ, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆ ಕೂಗುತ್ತಾ ಕಾಲಕಾಲೇಶ್ವರ ವೃತ್ತದ ಮೂಲಕ ದುರ್ಗಾ ಸರ್ಕಲ್ ನಲ್ಲಿ ಬೃಹತ್ ಪ್ರಮಾಣದ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಕಾರ್ಯಕ್ರಮದ ವೇದಿಕೆ ಮೇಲೆ ಸಿದ್ದಣ್ಣ ಬಂಡಿ,ವಿ. ಆರ್. ಗುಡಿಸಾಗರ, ಅಶೋಕ ಬಾಗಮಾರ, ಎಚ್. ಎಸ್. ಸೋಂಪುರ, ಮಂಜುಳಾ ರೇವಡಿ, ಮುರ್ತುಜ ಡಾಲಯತ,ಎಂ ಎಸ್. ಹಡಪದ, ಎ. ಡಿ. ಕೋಲಕಾರ,ಹನಮಂತಪ್ಪ ಅಬ್ಬಿಗೇರಿ, ಶರಣು ಪೂಜಾರ, ಪ್ರಶಾಂತ ರಾಠೋಡ್, ರವಿ ಗಡೇದವರ, ಸುಬ್ರಮಣ್ಯ ರೆಡ್ಡಿ, ಅಂದಪ್ಪ ಬಿಚ್ಚುರ, ವೆಂಕಟೇಶ ಮುದಗಲ್, ರಾಜು ಸಾಂಗ್ಲಿಕರ, ಯಲ್ಲಪ್ಪ ಬಂಕದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವರದಿ : ಸುರೇಶ ಬಂಡಾರಿ.