2 ನೇ ದಿನಕ್ಕೆ ಕಾಲಿಟ್ಟ ಬೀದಿ ಬದಿ ವ್ಯಾಪಾರಸ್ಥರ ಅನಿರ್ಧಿಷ್ಟಾವಧಿ ಹಗಲು- ರಾತ್ರಿ ಧರಣಿ.
ಗಜೇಂದ್ರಗಡ:ಸತ್ಯಮಿಥ್ಯ (ಡಿ -27)
ಪಟ್ಟಣದ ತಹಶಿಲ್ದಾರರ ಕಚೇರಿಯ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಬೀದಿ ಬದಿಯ ವ್ಯಾಪಾರಸ್ಥರ ಸಂಘ (ರಿ) (CITU ಸಂಯೋಜಿತ) ತಾಲೂಕು ಸಮಿತಿ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ೨ ನೇ ದಿನಕ್ಕೆ ಕಾಲಿಟ್ಟಿದೆ.
ಈ ವೇಳೆ ಸಿಪಿಐಎಂ ಪಕ್ಷದ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದರು.ಜಿಲ್ಲೆಯಲ್ಲಿಯೇ ಶರವೇಗದಲ್ಲಿ ಬೆಳೆಯುತ್ತಿರುವ ನಗರವಾಗಿದ್ದು ಇಲ್ಲಿನ ಸುತ್ತಮುತ್ತಲಿನ ಜನರಿಗೆ ವ್ಯಾಪಾರಸ್ಥರಿಗೆ ಒಂದು ಜೀವಾಳವಾಗಿದೆ.ಆದರೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲಾ ಹಾಗಾಗಿ ರಸ್ತೆ ಮೇಲೆ ಇರುವ ಮಾರುಕಟ್ಟೆಯನ್ನು ಏಕಾಏಕಿ ಸ್ಥಳಾಂತರ ಮಾಡಿದಕ್ಕೆ ಎಷ್ಟೋ ಬಡ ಕುಟುಂಬಗಳು ಬೀದಿಗೆ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನು ಇತ್ಯರ್ಥ ಪಡಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸೂಕ್ತ ಸಭೆ ಮಾಡಿ ಬಗೆಹರಿಸಬೇಕೆಂದು ಸಾಕಷ್ಟು ಭಾರಿ ಮನವಿ ಸಲ್ಲಿಸಿದರು. ಅಧಿಕಾರಿಗಳು ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲ ಇದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವನ್ನು ತೋರಿಸುತ್ತಿದೆ ಎಂದರು.
ಬೀದಿ ಬದಿ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಪೀರು ರಾಠೋಡ ಮಾತನಾಡಿ ಮಾರುಕಟ್ಟೆ ಸ್ಥಳಾಂತರದಿಂದ ವ್ಯಾಪಾರಸ್ಥರ ಬದುಕು ಕಷ್ಟ ಆಗಿದೆ. ನಮಗೆ ಒಂದು ಸೂಕ್ತ ಮಾರುಕಟ್ಟೆ ನೀಡಬೇಕು ನಮ್ಮ ಹಕ್ಕುಗಳ ರಕ್ಷಣೆ ಆಗಬೇಕು ನಮ್ಮ ಬೇಡಿಕೆ ಈಡೇರಿಕೆ ಆಗುವವರೆಗೂ ನಾವು ಹಗಲು ರಾತ್ರಿ ಧರಣಿಯನ್ನು ಮುಂದುವರೆಸುತ್ತೇವೆ ಎಂದರು.
ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಶೋಕಾಚರಣೆ ಸಲ್ಲಿಸುವ ಕನಿಷ್ಟ ತಿಳುವಳಿಕೆಯು ಸಹ ತಹಶಿಲ್ದಾರರ ಕಚೇರಿಯವರಿಗೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಬೀದಿ ಬದಿ ವ್ಯಾಪರಿಗಳು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಹೋರಾಟ ಬೆಂಬಲಿಸಿ SFI ರಾಜ್ಯ ಸಹ ಕಾರ್ಯದರ್ಶಿ ಚಂದ್ರು ರಾಠೋಡ ಮಾತನಾಡಿ ವ್ಯಾಪಾರಸ್ಥರಿಗೆ ಸೂಕ್ತ ಮಾರುಕಟ್ಟೆ ಮತ್ತು ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸವನ್ನು ಸ್ಥಳೀಯ ಸಂಸ್ಥೆ ಒದಗಿಸಬೇಕು ಇದನ್ನು ಇಲ್ಲಿನ ಜನಪ್ರತಿನಿಧಿಗಳು ಗಮನಹರಿಸಬೇಕು ಇಲ್ಲವಾದರೆ ವ್ಯಾಪಾರಸ್ಥರ ಮಕ್ಕಳು, ವಿದ್ಯಾರ್ಥಿಗಳು ಬಿದಿಗೆ ಬಂದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು
ಕೂಲಿಕಾರರ ಸಂಘದ ತಾಲೂಕಾ ಅಧ್ಯಕ್ಷ ಬಾಲು ರಾಠೋಡ, ಬೀದಿ ಬದಿ ವ್ಯಾಪರಸ್ಥರ ಸಂಘದ ಅಧ್ಯಕ್ಷ ಶಾಮೀದಸಾಬ ದಿಂಡವಾಡ, ಮೆಹಬೂಬ್ ಹವಾಲ್ದಾರ್, ಗಣೇಶ ರಾಠೋಡ, ಚೌಡಮ್ಮ ಯಲು, ಮೈಬೂಸಾಬ್ ಮಾಲ್ದಾರ.ಮುತ್ತಣ್ಣ ರಾಠೋಡ, ಅಂಬರೇಶ ಚವ್ಹಾಣ, ಮಾರುತಿ ಗೊಂದಳೆ, ಮುತ್ತಣ್ಣ ತೇಜಪ್ಪ ರಾಠೋಡ, ವೀಷ್ಣು ಚಂದುಕರ, ಮಹಾಂತೇಶ ಹೀರೇಮಠ, ಬಡಿಗೇರ ಪರಸುರಾಮ ಗಂಗಾಧರ ಸತ್ಯನ್ಯವರ, ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ವರದಿ : ಚನ್ನು. ಎಸ್.