ಯುವನೀತಿ, ಉದ್ಯೋಗ ನೀತಿಯ ಸ್ಪಷ್ಟ ಕಣ್ಣೋಟವಿಲ್ಲದ ಹಾಗೂ ಉದ್ಯೋಗ ಸೃಷ್ಠಿಗೆ ಒತ್ತು ನೀಡದ ಯುವಜನ ವಿರೋಧಿ ಬಜೆಟ್: ಡಿವಾಯ್ಎಫ್ಐ.

ಯುವನೀತಿ, ಉದ್ಯೋಗ ನೀತಿಯ ಸ್ಪಷ್ಟ ಕಣ್ಣೋಟವಿಲ್ಲದ ಹಾಗೂ ಉದ್ಯೋಗ ಸೃಷ್ಠಿಗೆ ಒತ್ತು ನೀಡದ ಯುವಜನ ವಿರೋಧಿ ಬಜೆಟ್: ಡಿವಾಯ್ಎಫ್ಐ

ಗಜೇಂದ್ರಗಡ:ಸತ್ಯಮಿಥ್ಯ (ಮಾ-07).
ಬಜೆಟ್ ನಲ್ಲಿ ರಾಜ್ಯದ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರಿಗೆ ಅತ್ಯಗತ್ಯವಿರುವ ಉದ್ಯೋಗ ಸೃಷ್ಠಿಸಿ, ಉದ್ಯೋಗ ಖಾತ್ರಿಗೊಳಿಸದೇ ಯುವಜನರಿಗೆ ನಿರಾಸೆಯನ್ನು ಮೂಡಿಸಿದ ಬಜೆಟ್ ಆಗಿದೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ತಾಲೂಕು ಸಮಿತಿ ಖಂಡಿಸುತ್ತದೆ.
ಜಿಲ್ಲಾ ಮುಖಂಡ ದಾವಲಸಾಬ ತಾಳಿಕೋಟಿ ಮಾತನಾಡಿ ಉದ್ಯೋಗಕ್ಕಾಗಿ ಹಂಬಲಿಸುತ್ತಿರುವ ರಾಜ್ಯದ ಯುವಜನತೆಯು ಮುಖ್ಯಮಂತ್ರಿಗಳು ಉದ್ಯೋಗ ನೀತಿ ಜಾರಿಗೊಳಿಸಿ ಉದ್ಯೋಗ ಭರವಸೆ ನೀಡುತ್ತಾರೆಂದು ಭಾವಿಸಿದ್ದರು, ಆದರೆ ಮಾನ್ಯ ಸಿದ್ರಾಮಯ್ಯನವರು ಮಂಡಿಸಿದ ದಾಖಲೆಯ 16ನೇ ಬಜೆಟ್ ರಾಜ್ಯದ ಯುವಜನರ ಬದುಕಿನ ಭದ್ರತೆಯ ಕುರಿತು ಯಾವುದೆ ಸ್ಪಷ್ಟ ಕಣ್ಣೋಟ ಹೊಂದಿಲ್ಲ ಎಂಬುದನ್ನು ಸಾಬೀತು ಪಡಿಸಿದೆ.
ಶಿಕ್ಷಣ ಇಲಾಖೆಯಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದು ಎಂಬ ಒಂದಂಶ ಹೊರತುಪಡಿಸಿದರೆ, ರಾಜ್ಯ ಸರಕಾರದಡಿ ಖಾಲಿಯಿರುವ ಎರಡು ಲಕ್ಷ 70 ಸಾವಿರ ಹುದ್ದೆಗಳ ಭರ್ತಿಗೂ ಯಾವುದೇ ಕ್ರಮ ಕೈಗೊಂಡಿಲ್ಲ ಅಲ್ಲದೇ ರಾಜ್ಯಕ್ಕೆ ಅಗತ್ಯವಿರುವ ಯುವ ನೀತಿಯನ್ನೂ ಕೂಡ ಜಾರಿ ಮಾಡಲು ಮುಂದಾಗಿಲ್ಲ. ಇದು ನಿರುದ್ಯೋಗ ಸಮಸ್ಯೆ ಎದುರಿಸುತ್ತಿರುವ ಯುವಜನರಿಗೆ ಸಹಜವಾಗಿಯೇ ನಿರಾಸೆ ಮೂಡಿಸಿದ ಬಜೆಟ್ ಆಗಿದೆ ಎಂದರು.
ವರದಿ : ಸುರೇಶ ಬಂಡಾರಿ.