ಜಿಲ್ಲಾ ಸುದ್ದಿ

ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೇ ಬಿಡುಗಡೆ ಮಾಡಿ!

Share News

ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೇ ಬಿಡುಗಡೆ ಮಾಡಿ.! ಕಾರ್ಮಿಕರು, ವಿದ್ಯಾರ್ಥಿಗಳಿಂದ ಗಜೇಂದ್ರಗಡ ನಗರದಲ್ಲಿ ವಿಜಯೋತ್ಸವ.

ಗಜೇಂದ್ರಗಡ :ಸತ್ಯಮಿಥ್ಯ (ಫೆ -01).

ನಗರದ ಸ್ಥಳೀಯ ಕೆ ಕೆ ಸರ್ಕಲ್ ನಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ತಾಲೂಕ ಘಟಕ ಹಾಗೂ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ಇರುವ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೇ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ ಅದಕ್ಕೆ ಕಾರ್ಮಿಕರು ಹಾಗೂ ವಿದ್ಯಾರ್ಥಿ ಸಂಘಟನೆ ಅದನ್ನು ಸ್ವಾಗತಿಸಿ ವಿಜೃಂಭಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕರ ಸಂಘಟನೆಯ ತಾಲ್ಲೂಕು ಕಾರ್ಯದರ್ಶಿ ಪೀರು ರಾಠೋಡ ಮಾತನಾಡಿ ರಾಜ್ಯದಲ್ಲಿ ನೂರಾರು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡಿಲ್ಲ , ಸುಮಾರು ೩ ವರ್ಷಗಳಿಂದ ವಿದ್ಯಾರ್ಥಿಗಳಿಗೆ ಸರಿಯಾಗಿ ಸ್ಕಾಲರ್ಶಿಪ್ ಬಿಡುಗಡೆ ಮಾಡದೆ ಇರುವುದು ಸರ್ಕಾರ ವೈಫಲ್ಯ. ಸಮಯಕ್ಕೆ ಸರಿಯಾಗಿ ರಾಜ್ಯದಲ್ಲಿ ಅರ್ಜಿಹಾಕುವ ಎಲ್ಲಾ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಬಾಕಿ ಇರುವ ಎಲ್ಲಾ ಸೌಲಭ್ಯಗಳ ಅರ್ಜಿಗಳನ್ನು ವಿಲೇವಾರಿ ಮಾಡಬೇಕು . ಕರ್ನಾಟಕ ರಾಜ್ಯ ಹೈಕೋರ್ಟ್ ಐತಿಹಾಸಿಕ ತೀರ್ಪನ್ನು ಸ್ವಾಗತ ಮಾಡುತ್ತೇವೆಂದು ಮಾತನಾಡಿದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಮುಖಂಡರಾದ ಬಾಲು ರಾಠೋಡ ಮಾತನಾಡಿ ರಾಜ್ಯದಲ್ಲಿ ಆಡಳಿತ ಸರ್ಕಾರ ಕಟ್ಟಡ ಕಾರ್ಮಿಕರಿಗೆ ವಂಚನೆ ಮಾಡಿ ಸಮಯಕ್ಕೆ ಸರಿಯಾಗಿ ಅರ್ಜಿಗಳನ್ನು ಕರೆಯದೆ ಇವತ್ತು ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ನೀಡದೆ ಶಿಕ್ಷಣದಿಂದ ವಂಚಿತರನ್ನಾಗಿಸಿದೆ. ದೇಶದಲ್ಲಿ ಬೇವರು ಸುರಿಸಿ ದುಡಿಯುವ ಕಾರ್ಮಿಕರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿಗೆ ತಂದು ಕಾರ್ಮಿಕರಿಗೆ ವಂಚನೆ ಮಾಡಿ ಶೈಕ್ಷಣಿಕ ಸಹಾಯಧನ ನೀಡದೆ ಸತಾಯಿಸುತ್ತಿದ್ದಾರೆ ಇದ್ದನ್ನು ವಿರೋಧಿಸಿ ನ್ಯಾಯಾಲಯದ ಮೋರೆ ಹೋಗಿ ದಾವೆಯನ್ನು ಹೂಡಿ ಇವತ್ತು ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪುನ್ನ ನೀಡಿದೆ ಅದಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಸ್ವಾಗತಿಸುತ್ತದೆ.

ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷ ಚಂದ್ರು ರಾಠೋಡ ನಿರೂಪಿಸಿದರು,ರೇಣಪ್ಪ ರಾಠೋಡ, ಆನಂದಪ್ಪ, ಶರಣು ಮಾದರ, ಗೀತಾ ಸೂಡಿ, ಸುನಿತಾ, ಅನಿಲ ರಾಠೋಡ, ವೀನೋದ ರಾಠೋಡ ಕನಕರಾಯ ಹಾದಿಮನಿ, ಪಾರ್ವತಿ ಚೀಟಗಿ ಮಂಜುನಾಥ ರಾಠೋಡ, ಗಂಗವ್ವ ಚವ್ಹಾಣ, ಲಕ್ಕವ್ವ ರಾಠೋಡ, ಶಂಕ್ರಪ್ಪ, ಶರಣವ್ವ, ಐಶ್ವರ್ಯ ಚವ್ಹಾಣ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ : ಸುರೇಶ ಬಂಡಾರಿ.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!