
ಜಿಲ್ಲಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ಲೋಕ ಅದಾಲತ್.
ಗದಗ : ಸತ್ಯಮಿಥ್ಯ (ಜು-12)
ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಇಂದು ವಿವಿಧ ಪ್ರಕರಣಗಳ ಕುರಿತಂತೆ ಜಿಲ್ಲಾ ನ್ಯಾಯಾಧೀಶರಿಂದ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲಾಯಿತು.
ಲೋಕ ಅದಾಲತ್ ನಲ್ಲಿ ಪ್ರಕರಣಗಳ ಕುರಿತಂತೆ ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್‍ಬೌನ್ಸ್ ಪ್ರಕರಣಗಳು, ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು, ಪಾಲುವಾಟ್ನಿ ಪ್ರಕರಣಗಳು, ಬ್ಯಾಂಕ್ ಹಾಗೂ ಹಣ ವಸೂಲಾತಿ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ವಿದ್ಯುತ್ ಕಾಯ್ದೆ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳು ಸೇರಿದಂತೆ ಪ್ರಕರಣಗಳ ವಿಚಾರಣೆಯನ್ನು ಮಾಡಿ ಇತ್ಯರ್ಥ ಪಡಿಸಲಾಯಿತು.
ವರದಿ : ಮುತ್ತು ಗೋಸಲ.