ಜಿಲ್ಲಾ ಸುದ್ದಿ
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು, ಚಿಕಿತ್ಸೆ ಫಲಿಸದೇ ಅಪ್ರಾಪ್ತೆ ಸಾವು, ಯುವಕನಿಗೆ ಚಿಕಿತ್ಸೆ.

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು, ಚಿಕಿತ್ಸೆ ಫಲಿಸದೇ ಅಪ್ರಾಪ್ತೆ ಸಾವು, ಯುವಕನಿಗೆ ಚಿಕಿತ್ಸೆ.
ಗಜೇಂದ್ರಗಡ: ಸತ್ಯಮಿಥ್ಯ (ಜು-09)
ರಾಜೂರು ಗ್ರಾಮದಲ್ಲಿ ಜುಲೈ ಏಳನೇ ತಾರೀಕು ಸೋಮವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ರಾಜೂರು ಗ್ರಾಮದ ಹೊರ ವಲಯದಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನ ಪಟ್ಟ ಘಟನೆ ಜರುಗಿದೆ.
ಗ್ರಾಮದ ಹೊರ ವಲಯದ ಜಮೀನಿನಲ್ಲಿ ಕ್ರಿಮಿನಾಶಕ ಸೇವನೆ ಮಾಡಿದ್ದ ಪ್ರೇಮಿಗಳಿಬ್ಬರು ಅಸ್ವಸ್ಥ ಗೊಂಡಿದ್ದರು. ಇಬ್ಬರನ್ನೂ ಗದುಗಿನ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು.
ಚಿಕಿತ್ಸೆ ಫಲಿಸದೇ ಅಪ್ರಾಪ್ತೆ ಸಾವನ್ನಪ್ಪಿದ್ದು ಯುವಕ ದೇವಪ್ಪ ಹಾದಿಮನಿಗೆ ಚಿಕಿತ್ಸೆ ಮುಂದುವರೆದಿದೆ
ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ವರದಿ: ಚನ್ನು. ಎಸ್.