
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವದು – ಮಾಜಿ ಸಚಿವ ಕೆ.ಜಿ.ಬಂಡಿ.
ಗಜೇಂದ್ರಗಡ: ಸತ್ಯಮಿಥ್ಯ (ಸೆ-13)
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ, ರೋಣ ಮಂಡಲದಿಂದ ಸಪ್ಟಂಬರ್ 17 ರಿಂದ ಅಕ್ಟೋಬರ್ 2ರವರೆಗೆ ವಿವಿಧ ಸೇವಕಾರ್ಯಗಳನ್ನು ಹಮ್ಮಿಕೊಂಡಿದ್ದು ಮೋದಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮಾಜಿ ಸಚಿವ ಕಳಕಪ್ಪ ಜಿ ಬಂಡಿ ಹೇಳಿದರು.
ಪಟ್ಟಣದ ಗೃಹ ಕಚೇರಿಯಲ್ಲಿ ನಡೆದ ಸೇವಾ ಪಾಕ್ಷಿಕ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು ಮೋದಿಜಿಯವರ ಆತ್ಮ ನಿರ್ಬರ ಭಾರತ ಕಲ್ಪನೆಯೊಂದಿಗೆ ವಿಕಸಿತ ಭಾರತ ಕಲ್ಪನೆಯನ್ನು ಸಹಕಾರ ಗೊಳಿಸಲು ಕಾರ್ಯಕರ್ತರು ಶ್ರಮವಹಿಸಬೇಕೆಂದು ಹೇಳಿದರು.
ಬಿಜೆಪಿ ರೋಣ ಮಂಡಲ ಅಧ್ಯಕ್ಷ ಉಮೇಶ ಮಲ್ಲಾಪುರ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಂಬಳ ಮಂಡಲ ಅಧ್ಯಕ್ಷ ಅಂದಪ್ಪ ಹಾರೋಗೇರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್ ಕೆ ಚೌಹಾನ್ ಪಕ್ಷದ ಮುಖಂಡರಾದ ಮುದಿಯಪ್ಪ ಕರಡಿ ಶಿವಾನಂದ ಮಠದ, ಅಶೋಕ ನವಲಗುಂದ,ಶಶಿಧರ ಸಂಕನಗೌಡ್ರು, ಮುದ್ಲಿಂಗಪ್ಪ ಕೊರ್ಲಳ್ಳಿ, ಅಶೋಕ ಬ್ಯಾಹಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ ವಕ್ಕರ್, ನಗರ ಘಟಕದ ಅಧ್ಯಕ್ಷ ರಾಜೇಂದ್ರ ಘೋರ್ಪಡೆ, ಹಿಂದುಳಿದ ಮೋರ್ಚಾ ಅಧ್ಯಕ್ಷ ರಂಗನಾಥ ಮೇಟಿ, ಯುವ ಮೋರ್ಚಾ ಅಧ್ಯಕ್ಷ ಹುಲ್ಲಪ್ಪ ಕೆಂಗಾರ, ಎಸ್ ಸಿ ಮೋರ್ಚಾ ಅಧ್ಯಕ್ಷ ಭೀಮಪ್ಪ ಮಾದರ, ರೈತ ಮೋರ್ಚಾ ಅಧ್ಯಕ್ಷ ಶಂಕರ ಇಟಗಿ,ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸಲೀಂ ಕಲಾದಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವರದಿ: ಸುರೇಶ ಬಂಡಾರಿ.