ಜಿಲ್ಲಾ ಸುದ್ದಿ

ಕಾರಿನ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜ: ಸುಮೊಟೊ ಪ್ರಕರಣ ದಾಖಲು.

Share News

ಕಾರಿನ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜ: ಸುಮೊಟೊ ಪ್ರಕರಣ ದಾಖಲು.

ಗದಗ : ಸತ್ಯಮಿಥ್ಯ (ಸೆ-11).

ಬಾಲಕನೊಬ್ಬ ಕಾರಿನ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ನಗರದ ಶಹರ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.

ಈದ್ ಮಿಲಾದ್ ಹಬ್ಬದಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಬಾಲಕ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪಾಕಿಸ್ತಾನ ಧ್ವಜವನ್ನು ಪ್ರದರ್ಶಿಸುತ್ತಿರುವ ಫೋಟೊ ಹಂಚಿಕೊಂಡಿದ್ದಾನೆ.

ಈ ಪೋಸ್ಟ್ ಅನ್ನು ಅಬ್ದುಲ್ ಎಂಬ ಇನ್ನೊಬ್ಬ ವ್ಯಕ್ತಿ ತನ್ನ ಖಾತೆಯಲ್ಲಿ ಮರು ಹಂಚಿಕೊಂಡಿದ್ದಾನೆ.

ಕಾರಿನ ಬಾನೆಟ್ ಮೇಲೆ ಇಸ್ಲಾಂ ಧರ್ಮದ ಬಾವುಟದ ಜತೆಗೆ ಪಾಕಿಸ್ತಾನದ ಧ್ವಜದ ಚಿತ್ರವು ಕಂಡು ಬಂದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ, ಗದಗ ಶಹರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಾಯ್ದೆಯ ಕಲಂ 299, 353(2) ಮತ್ತು 3/5ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿ : ಮುತ್ತು ಗೋಸಲ.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!