
ನಾಳೆ ನಾಡಿದ್ದು ವಿಶೇಷ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪುರಾಣ ಮಹಾಮಂಗಲೋತ್ಸವ.
ಗಜೇಂದ್ರಗಡ:ಸತ್ಯಮಿಥ್ಯ (ಆ-22).
ವೀರಶೈವ ಲಿಂಗಾಯತ ಸಮಾಜ ಗಜೇಂದ್ರಗಡ-ಉಣಚಗೇರಿ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ಶ್ರೀ ಹಾನಗಲ್ ಕುಮಾರಮಹಾಸ್ವಾಮಿಗಳ ಪುರಾಣ ಮಹಾಮಂಗಲೋತ್ಸವ ನಿಮಿತ್ತ ಆ.23 ರಂದು ಶನಿವಾರ ಸಂಜೆ 6 ಗಂಟೆಗೆ ಧಾರ್ಮಿಕ ಕಾರ್ಯಕ್ರಮ ಜರುಗುವುದು.
ಪಾವನ ಸಾನಿಧ್ಯವನ್ನು ಮೈಸೂರುಮಠದ ವಿಜಯಮಹಾಂತ ಸ್ವಾಮೀಜಿ, ಸಾನಿಧ್ಯವನ್ನು ಹಾಲಕೆರೆಯ ಅನ್ನದಾನೇಶ್ವರ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ, ಯಲಬುರ್ಗಾ ಶ್ರೀಧರಮುರಡಿ ಹಿರೇಮಠದ ಬಸವಲಿಂಗ ಶಿವಾಚಾರ್ಯರು, ನಿಡಗುಂಡಿಕೊಪ್ಪದ ಚನ್ನಬಸವ ಸ್ವಾಮೀಜಿ ಸಾನಿಧ್ಯ ವಹಿಸುವವರು.
ಧಾರ್ಮಿಕ ಕಾರ್ಯಕ್ರಮವನ್ನು ಶಾಸಕ ಜಿ.ಎಸ್.ಪಾಟೀಲ ಉದ್ಘಾಟಿಸುವವರು.ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷ ಸಿದ್ದಪ್ಪ ಬಂಡಿ ವಹಿಸುವವರು. ಸೇರಿದಂತೆ ಇತರ ಅತಿಥಿಗಳು ಭಾಗವಹಿಸುವವರು. ಈ ವೇಳೆಯಲ್ಲಿ 2024-25 ಸಾಲಿನಲ್ಲಿ ನಿವೃತ್ತಿ ಹೊಂದಿದ ಸ್ಥಳೀಯ ನೌಕರರಿಗೆ ಹಾಗೂ ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಜರುಗುವುದು.
ಆ.24 ರಂದು ಭಾನುವಾರ ಪುರಾಣ ಮಹಾಮಂಗಲೋತ್ಸವ ನಿಮಿತ್ತ ಶ್ರೀ ಹಾನಗಲ್ ಕುಮಾರ ಮಹಾಸ್ವಾಮಿಗಳ ಭಾವಚಿತ್ರದ ಮೆರವಣಿಗೆಯು ಬೆಳಿಗ್ಗೆ 9 ಗಂಟೆಗೆ ಮೈಸೂರ ಮಠದಿಂದ ಪ್ರಾರಂಭಗೊಂದು 600 ಕ್ಕೂ ಹೆಚ್ಚು ಸುಮಂಗಲೆಯರಿಂದ ಪೂರ್ಣಕುಂಭ, ಸಕಲ ವಾದ್ಯಮೇಳಗಳೊಂದಿಗೆ ಭವ್ಯ ಮೆರವಣಿಗೆಯು ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸುವುದು ಎಂದು ಸಮಾಜದ ಯುವ ಘಟಕದ ಅಧ್ಯಕ್ಷ ಅಪ್ಪು ಮತ್ತಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಸುರೇಶ ಬಂಡಾರಿ.