
ಗದಗ : ಸಾರ್ವಜನಿಕ ಶ್ರೀ ಗಜಾನನೋತ್ಸವ ಮಹಾಮಂಡಳಿ ವತಿಯಿಂದ ಪೂರ್ವಭಾವಿ ಸಭೆ

ಗದಗ : ಸತ್ಯಮಿಥ್ಯ (ಆ-21)
ನಗರದ ಸಾರ್ವಜನಿಕ ಶ್ರೀ ಗಜಾನನೋತ್ಸವ ಮಹಾಮಂಡಳಿ ವತಿಯಿಂದ 2025 ನೇ ಸಾಲಿನ ಪೂರ್ವಭಾವಿ ಸಭೆಯನ್ನು ದಿನಾಂಕ 24 ರವಿವಾರದಂದು ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಮಧ್ಯಾಹ್ನ 12:00 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮಹಾಮಂಡಳಿಯ ಅಧ್ಯಕ್ಷರಾದ ರಾಜಣ್ಣ ಮಲ್ಲಾಡದ ಅವರು ಪತ್ರಿಕಾ ಪ್ರಕಟಣೆ ಮೂಲಕ ಹೇಳಿದ್ದಾರೆ.
ನಂತರ ಮಾತನಾಡಿದ ಅವರು ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಗದಗ ಬೆಟಗೇರಿ ಅವಳಿ ನಗರದ ಎಲ್ಲಾ ಮಂಡಳಿಯವರು ಸಲಹೆ ಸೂಚನೆಗಳನ್ನು ಕೊಡುವುದರೊಂದಿಗೆ ಒಗ್ಗಟ್ಟಿನೊಂದಿಗೆ ಗಣೇಶೋತ್ಸವವನ್ನು ಆಚರಿಸೋಣ ಆದ್ದರಿಂದ ಸರ್ವ ಗಜಾನನ ಮಹಾಮಂಡಳಿಯ ಸದಸ್ಯರು ಹಾಗೂ ಎಲ್ಲ ಗಣೇಶ ಉತ್ಸವ ಮಂಡಳಿಯ ಅಧ್ಯಕ್ಷರು ಪದಾಧಿಕಾರಿಗಳು ಪೂರ್ವಭಾವಿ ಸಭೆಗೆ ಆಗಮಿಸಿ ಪೂರ್ವಭಾವಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ವರದಿ : ಮುತ್ತು ಗೋಸಲ.