
ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಜನಜೀವನ ಅಸ್ತವ್ಯಸ್ತ.

ಗದಗ/ಸತ್ಯಮಿಥ್ಯ(ಸೆ-27).
ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ದಿನದಿಂದ ಶನಿವಾರ ಮುಂಜಾನೆಯವರೆಗೆ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದ ಶನಿವಾರ ಬೆಳಿಗ್ಗೆ ಕಚೇರಿಗೆ ಹೋಗುವ ನೌಕರರು, ಶಾಲೆ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಪರದಾಡಿದರು. ನಿರಂತರ ಮಳೆಯ ಜೊತೆಗೆ ಲಘುವಾಗಿ ಗಾಳಿ ಹಾಗೂ ಚಳಿಯ ವಾತಾವರಣ ಇದ್ದು, ಬಹುತೇಕ ಜನರು ಮನೆಯನ್ನು ಬಿಟ್ಟು ಹೊರಗೆ ಬರಲು ಹಿಂದೇಟು ಹಾಕಿದರು.
ರಾತ್ರಿಯಿಡೀ ಸುರಿದ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳು ಮನೆಗಳಿಗೆ ನೀರು ನುಗ್ಗಿದ ವರದಿಯಾಗಿದೆ.
ನಗರದಲ್ಲಿ ಶನಿವಾರ ಮುಂಜಾನೆ ಸುರಿಯುತ್ತಿರುವ ಮಳೆಯಿಂದಾಗಿ ವ್ಯಾಪಾರ ವೈವಾಟುಗಳಿಗೆ ಗ್ರಾಹಕರಿಲ್ಲದೆ ವ್ಯಾಪಾರಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.
ವರದಿ :ಮುತ್ತು ಗೋಸಲ.