ಚಿಕ್ಕ ಮಕ್ಕಳಲ್ಲಿ ಯೋಗದ ಪರಿಕಲ್ಪನೆ ಮೂಡಿಸುತ್ತಿರುವ ಬ್ರೈಟ್ ಬಿಗಿನಿಂಗ್ .
ಬ್ರೈಟ್ ಬಿಗಿನಿಂಗ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ.
ಬ್ರೈಟ್ ಬಿಗಿನಿಂಗ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ.
ಗಜೇಂದ್ರಗಡ: ಸತ್ಯ ಮಿಥ್ಯ ( ಜೂ -21)
ನಗರ ಸಮೀಪದ ಬ್ರೈಟ್ ಬಿಗಿನಿಂಗ್ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ೧೦ ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಬಳಿಕ ಸಂಸ್ಥೆಯ ಚೇರ್ಮನ್ ಸೀತಲ ಓಲೇಕಾರ ಮಾತನಾಡಿ ಈ ಬಾರಿಯ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.
ಯೋಗವು ದೇಹ, ಮನಸ್ಸು ಮತ್ತು ಚೈತನ್ಯವನ್ನು ಆರೋಗ್ಯವಾಗಿಟ್ಟುಕೊಳ್ಳಲು ಉತ್ತಮ ಮಾರ್ಗವಾಗಿದೆ. ಅಂತರಾಷ್ಟ್ರೀಯ ಯೋಗ ದಿನದ ಈ ಸಂದರ್ಭದಲ್ಲಿ ಚಿಕ್ಕ ಮಕ್ಕಳಲ್ಲಿ ಯೋಗದ ಪರಿಕಲ್ಪನೆ ಮೂಡಿಸುವಲ್ಲಿ ಸಂಸ್ಥೆ ಶ್ರಮಿಸುತ್ತದೆ.ಯೋಗವನ್ನು ನಮ್ಮ ದಿನಚರಿಯಲ್ಲಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಒಟ್ಟಾಗಿ ಶ್ರಮಿಸೋಣ ಎಂದು ಹೇಳಿದ್ದಾರೆ.
ಬಳಿಕ ಶಾಲೆಯ ಮುಖ್ಯ ಶಿಕ್ಷಕಿ ನಾಜೀಯಾ ಮುದಗಲ್ ಮಾತನಾಡಿ ಇತ್ತಿಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮುದ್ದು ಮಕ್ಕಳು ತಮ್ಮ ಮುಗ್ದತೆಯ ಯೋಗ ಪ್ರದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಅನುಷಾ ತಳವಾರ, ರೂಪಾ ಗೊಂಧಳೆ, ಆಸ್ಮಾಂ ನಧಾಫ್, ಸಾವಿತ್ರಿ ಹಾವೇರಿ, ಲಕ್ಷ್ಮಿ ಬೋನೇರಿ, ರೇಣುಕಾ ಕೊಪ್ಪದ, ಅಂಜುಮ, ರವಿ ನಿಡಗುಂದಿ , ಬಸು ಮುಧೋಳ ಸೇರಿದಂತೆ ಅನೇಕರು ಇದ್ದರು.