ತಾಲೂಕುಸ್ಥಳೀಯ ಸುದ್ದಿಗಳು
ಎಸ್‌ಸಿ, ಎಸ್‌ಟಿ ಕಾನೂನು ಪದವೀಧರರಿಗೆ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ

ಎಸ್‌ಸಿ, ಎಸ್‌ಟಿ ಕಾನೂನು ಪದವೀಧರರಿಗೆ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ-ಸತ್ಯ ಮಿಥ್ಯ (ಜೂನ್ 15 )
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು www.sw.kar.nic.in ರ ಮೂಲಕ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು www.tw.kar.nic.in ರ ಮುಖಾಂತರ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿ ಪ್ರತಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ತಮ್ಮ ತಾಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ/ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳವರ ಕಛೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.