
ಕೆ ಎಸ್ ಎಸ್ ಮುಖ್ಯಸ್ಥ ರವಿ ದಂಡಿನರವರಿಗೆ ಜಯಶ್ರೀ ಸನ್ಮಾನ.
ಹುಬ್ಬಳ್ಳಿ : ಸತ್ಯಮಿಥ್ಯ (ಸೆ -09).
ಕನಕದಾಸ ಶಿಕ್ಷಣ ಸಂಸ್ಥೆಯ ಮೂಲಕ ಶೈಕ್ಷಣಿಕ ಕ್ಷೇತ್ರಕ್ಕೆ ಮಹತ್ತರವಾದ ಕೊಡುಗೆ ನೀಡಿದ ಸಂಸ್ಥೆ ಮುಖ್ಯಸ್ಥ ರವಿ ದಂಡಿನರವರು.ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ನೀಡುವ ಜಯಶ್ರೀ ಸಮ್ಮಾನ್ ಗೌರವಕ್ಕೆ ಪಾತ್ರರಾಗಿದ್ದಾರೆ.
ಇದೇ ರೀತಿಯಾಗಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ , ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಕಾರಣರಾಗಿರುವ ಇನ್ನಿರ್ವ ಗೌರವಾನ್ವಿತರು ರಾಣೆಬೆನ್ನೂರಿನ ಬಿ ಎ ಜೆ ಎಸ್ ಎಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ. ಆರ್. ಎಂ. ಕುಬೇರಪ್ಪ ಮತ್ತು ಕುಂದಗೋಳದ ಸರ್ವೋದಯ ಶಿಕ್ಷಣ ಸಂಸ್ಥೆಯ ಚೆನ್ನಬಸಪ್ಪ ಧಾರವಾಡ ಶೆಟ್ಟರ್ ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ಸೆ 14 ರಂದು ಶಿರಸಿಯಲ್ಲಿ ಜರುಗಲಿರುವ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ರಾಜ್ಯಮಟ್ಟದ ಎಂಟನೇ ಶಿಕ್ಷಕ ಸಾಹಿತಿಗಳ ಸಮ್ಮೇಳನದಲ್ಲಿ ಗೌರವಿಸಲಾಗುವುದು. ಈ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಪ್ರಾಧ್ಯಾಪಕ ಡಾ. ಜಿ.ಎಂ. ಹೆಗಡೆ ಸೋಂದಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಚನ್ನು. ಎಸ್.