ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ದೊಡ್ಡದು : ಸಾಂಗ್ಲೀಕಾರ.

ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ದೊಡ್ಡದು : ಸಾಂಗ್ಲೀಕಾರ

ಗಜೇಂದ್ರಗಡ:ಸತ್ಯಮಿಥ್ಯ (ಸೆ- 04)
ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ದೊಡ್ಡದು ಎಂದು ಪುರಸಭೆ ಸದಸ್ಯ ರಾಜು ಸಾಂಗ್ಲಿಕಾರ ಹೇಳಿದರು.
ನಗರದ ಮೌಲಾನ ಆಜಾದ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ಯವಾಗಿ ಆಯೋಜಿಸಿದ್ದ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರ ದಿನಾಚರಣೆ ಕೇವಲ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗದೆ, ಇಡೀ ಸಮಾಜ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ ಶಿಕ್ಷಕ ಸಮುದಾಯವನ್ನು ಗೌರವಿಸಬೇಕು’ ಎಂದು ಕರೆ ನೀಡಿದರು.
ನಿವೃತ್ತ ಶಿಕ್ಷಕ ಪಿ.ಎನ್ ಡೊಳ್ಳಿನ ಮಾತನಾಡಿ ಶಿಕ್ಷಕರಿಂದ ಪಾಠ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಂಡ ವಿದ್ಯಾರ್ಥಿಗಳು ವಿದ್ಯೆ ಕಲಿಸಿದ ಗುರುವನ್ನು ಸದಾ ಕಾಲ ನೆನಪಿನಲ್ಲಿಟ್ಟುಕೊಂಡು ಗೌರವಿಸುವಂತಹ ಕೆಲಸ ಮಾಡಬೇಕು ಎಂದರು.

ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಮಾತನಾಡಿ.ಅಜ್ಞಾನದ ಅಂಧಕಾರ ತೊಲಗಿಸಿ ಜ್ಞಾನದ ಬೆಳಕನ್ನು ನೀಡುವಲ್ಲಿ ಗುರುತರ ಜವಾಬ್ದಾರಿ ಇರುವ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಶಿಕ್ಷಕರು, ಮಕ್ಕಳನ್ನು ಸಮಾಜದಲ್ಲಿ ಪ್ರಜ್ಞಾವಂತರನ್ನಾಗಿ ನಿರ್ಮಾಣ ಮಾಡುವ ದೊಡ್ಡ ಹೊಣೆಗಾರಿಕೆಯನ್ನು ಹೊತ್ತಿದ್ದಾರೆ. ಯಾವುದೇ ವೃತ್ತಿಗೆ ಇಲ್ಲದೆ ಇರುವಷ್ಟು ಮಹತ್ವ ಶಿಕ್ಷಕ ವೃತ್ತಿಗಿದೆ, ಸಮಾಜದಲ್ಲಿನ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಮರೆಯಲಾರದ ಏಕೈಕ ವ್ಯಕ್ತಿ, ಗುರು, ಒಬ್ಬ ಶಿಕ್ಷಕ ಮೈ ಮರೆತರೆ ಇಡೀ ವ್ಯವಸ್ಥೆ ಹಾಳಾಗುತ್ತದೆ ಎಂದರು.
ಮುಖ್ಯೋಪಾಧ್ಯಾಯರಾದ ಬಸವರಾಜ ಮನೋಟಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ವೇಳೆ ನಿವೃತ್ತ ಶಿಕ್ಷಕರಾದ ಪಿ.ಎನ್.ಡೊಳ್ಳಿನವರು ಮೌಲಾನ ಅಜಾದ ಶಾಲೆಯ ಶಿಕ್ಷಕರನ್ನು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಸಹ ಶಿಕ್ಷಕರಾದ ದಾದಪೀರ ಹವಾಲ್ದಾರ್, ಹೀನಾಕೌಸರ ಮಕಾನದಾರ, ಮಂಜುನಾಥ ದಾನೋಜಿ, ಬಸವರಾಜ ಕಮಟರ, ತಿಮ್ಮಣ್ಣ ಕೊಸಗಿ, ಷಣ್ಮುಖ ಕರಮುಡಿ, ದೇವಿಕಾ ರಾಠೋಡ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ : ಸುರೇಶ ಬಂಡಾರಿ.