ಭಾರತಕ್ಕೆ ಸಂವಿದಾನವೇ ದೊಡ್ಡ ಬಲ: ಬಸಗೌಡ ಪಾಟೀಲ.
ಮೂಡಲಗಿ:ಸತ್ಯಮಿಥ್ಯ (ನ -26)
ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯಗಳನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ಅದು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನಾಗಿದೆ ಎಂದು ಎಸ್.ಆರ್.ಇ. ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು.
ಅವರು ತಾಲೂಕಿನ ಕಲ್ಲೋಳಿ ಪಟ್ಟಣ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ರಾಸೇಯೋ ಘಟಕ, ಬೆಳಗಾವಿ ನೆಹರು ಯುವ ಕೇಂದ್ರ ಹಾಗೂ ಶ್ರೀ ಸಿದ್ದರೋಡ ಮಹಿಳಾ ಕಲಾ ಸಂಘ ಜೋಕಾನಟ್ಟಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಮಾತನಾಡಿ, ಭಾರತವನ್ನು ಸಾರ್ವಭೌಮ, ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ಗಣತಂತ್ರ ದೇಶ ಎಂದು ಸಂವಿಧಾನದಲ್ಲಿ ಘೋಷಿಸಲಾಗಿದೆ. ಇಲ್ಲಿರುವ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಒದಗಿಸಲಾಗಿದೆ. ಭಾರತದ ಸಂವಿಧಾನವನ್ನು ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ ಎಂದರು.
ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಶಂಕರ ನಿಂಗನೂರ ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ, ಭಾರತದ ಇತಿಹಾಸದಲ್ಲಿ ನವೆಂಬರ್ 26 ರಂದು ನಮ್ಮದೇ ಆದ ಸ್ವತಂತ್ರ ಸಂವಿಧಾನ ಪಡೆದ ದಿನವಾದರೆ ಇನ್ನೊಂದಡೆ ಕರಾಳ ದಿನವಾಗಿದೆ. 2008ರಲ್ಲಿ ಭಯೋತ್ಪಾದರು ಮುಂಬೈ ನಗರ ಮೇಲೆ ದಾಳಿಮಾಡಿ 16 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ದಿನವು ಆಗಿದೆ. ದಾಳಿಯ ವೇಳೆ ಉಗ್ರರ ವಿರುದ್ಧ ಹೋರಾಡಿ ಪ್ರಾಣತ್ಯಾಗ ಮಾಡಿದ ಹುತಾತ್ಮರಿಗೆ ನುಡಿನಮನ ಅರ್ಪಿಸಿದರು.
ಗೋಕಾಗದ ಶಿಕ್ಷಕ-ಸಾಹಿತಿ ರಮೇಶ ಮಿರ್ಜಿ, ಮೂಡಲಗಿಯ ಸಾಹಿತಿ ಬಾಲಶೇಖರ ಬಂದಿ ಮಾತನಾಡಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಮಲ್ಲಪ್ಪ ಮುರಗೋಡ ಪ್ರತಿಜ್ಞಾ ವಿಧಿ ಬೋಧಿಸಿದರು.
ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕ ಸಾತಪ್ಪ ಖಾನಾಪೂರ, ನೆಹರು ಯುವ ಕೇಂದ್ರದ ರಾಷ್ಟ್ರೀಯ ಸೇವಾ ಕಾರ್ಯಕರ್ತೆ ಭಾರತಿ ಜೋಕಾನಟ್ಟಿ, ಗ್ರಂಥಪಾಲಕ ಬಿ.ಬಿ. ವಾಲಿ, ಐಕ್ಯೂಎಸಿ ಸಂಯೋಜಕ ಡಾ. ಎಂ.ಬಿ. ಕುಲಮೂರ ಇನ್ನಿತರರು ಉಪಸ್ಥಿತರಿದ್ದರು.
ಡಾ. ಕೆ.ಎಸ್. ಪರವ್ವಗೋಳ ನಿರೂಪಿಸಿದರು. ಪ್ರೊ. ಡಿ.ಎಸ್. ಹುಗ್ಗಿ ಸ್ವಾಗತಿಸಿದರು, ಪ್ರೊ. ವಿಲಾಸ ಕೆಳಗಡೆ ವಂದಿಸಿದರು.
ವರದಿ : ಶಿವಾನಂದ ಮುಧೋಳ್.