
ಪ್ಯಾಟಿ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ.

ಗಜೇಂದ್ರಗಡ – ಸತ್ಯಮಿಥ್ಯ (ಜುಲೈ- 30).
ಗಜೇಂದ್ರಗಡ ತಾಲೂಕಿನ ಕಟ್ಟ ಕಡೆಯ ಗ್ರಾಮವಾದ ಪ್ಯಾಟಿ ಗ್ರಾಮದ ಸರ್ಕಾರಿ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ ದೊರಕಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಸಂಸ್ಥಾಪಕ ಶ್ರೀ ಮಧುಸೂದನ್ ಸಾಯಿ ಪ್ರಶಸ್ತಿ ಪ್ರಧಾನ ಮಾಡಿದರು. ಪ್ರಶಸ್ತಿ ಪಡೆದ ಶಾಲೆಯ ಗ್ರಂಥಾಲಯಕ್ಕೆ 8 ಸಾವಿರ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಮತ್ತು ಶಿಕ್ಷಕರರಿಗೆ ಡೈರಿ ಮತ್ತು ಪ್ರಶಸ್ತಿ ಪತ್ರವನ್ನು ನೀಡಿದರು.
ಈ ಪ್ರಶಸ್ತಿಯನ್ನು ಚಿಕ್ಕಬಳ್ಳಾಪುರದ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಕೊಡಲಾಗಿದ್ದು. ಟ್ರಸ್ಟ್ ನವರು ಗ್ರಾಮೀಣ ಭಾಗದ ಶಾಲೆಗಳಲ್ಲಿ ಪರಿಸರ ಕಾಳಜಿ, ಶೈಕ್ಷಣಿಕ ಪ್ರಗತಿ ಮತ್ತು ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸುವಲ್ಲಿ ವಿಭಿನ್ನ ರೀತಿಯ ಕಲಿಕೆ ಕ್ರಮವನ್ನು ಅನುಸರಿಸುವ ಶಾಲೆಗಳಿಗೆ ನೀಡುತ್ತಿದ್ದಾರೆ.
ಗ್ರಾಮೀಣ ಭಾಗದ ಕೊನೆಯ ಹಳ್ಳಿಯ ಶಾಲೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ್ದು ಸಂತೋಷವಾಗುತ್ತದೆ, ನಮ್ಮ ಶಾಲೆಯ ಶೈಕ್ಷಣಿಕ ಪ್ರಗತಿ, ಪರಿಸರ ಕಾಳಜಿಯನ್ನು ಗುರುತಿಸಿದ್ದರಿಂದ. ನಮ್ಮ ಶಾಲೆ ಶಿಕ್ಷಕರಲ್ಲಿ ಮತ್ತು ಎಸ್ ಡಿ ಎಮ್ ಸಿ ಸದಸ್ಯರಲ್ಲಿ ಮತ್ತು ವಿದ್ಯಾರ್ಥಿಗಳ ಪಾಲಕರಿಗೆ ಸಂತೋಷದ ಜೊತೆಗೆ ಜವಾಬ್ದಾರಿ ಹೆಚ್ಚಿಸಿದೆ ಎಂದು ಶಿಕ್ಷಕ ರಾಜು ಪ್ರತಿಕ್ರಿಯಿಸಿದ್ದಾರೆ.
ವರದಿ : ಸುರೇಶ ಬಂಡಾರಿ.