ರಾಷ್ಟ್ರವನ್ನು ಪ್ರಗತಿ ಪಥದತ್ತ ಕೊಂಡೊಯ್ಯಲು ಬಿಜೆಪಿಯೊಂದಿಗೆ ಜೊತೆಯಾಗಿ-ರಾಜಶೇಖರಗೌಡ ಕಟ್ಟೇಗೌಡ
ಹಾವೇರಿ:ಸತ್ಯಮಿಥ್ಯ(ಸೆ-16).
ನರೇಂದ್ರ ಮೋದಿಯವರ ನೇತೃತ್ವದಲ್ಲಿ ರಾಷ್ಟ್ರವನ್ನು ಪ್ರಗತಿ ಪಥದತ್ತ ಕೊಂಡೊಯ್ಯಲು ಬಿಜೆಪಿಯೊಂದಿಗೆ ಕೈ ಜೋಡಿಸಿ. ರಾಜ್ಯದಲ್ಲಿ ಲಾ ಅಂಡ್ ಆರ್ಡರ ಸಂಪೂರ್ಣ ಹದಗೆಟ್ಟುಹೋಗಿದೆ. ಪ್ರತಿ ಭೂತ್ ಮಟ್ಟದಲ್ಲಿ 300 ಕ್ಕಿಂತ ಹೆಚ್ಚು ಬಿಜೆಪಿ ಸದಸ್ಯರನ್ನು ಮಾಡುವ ಮೂಲಕ ಪ್ರಧಾನ ಮಂತ್ರಿ ಆಡಳಿತಕ್ಕೆ ಬೆಂಬಲವಾಗಿ ನಿಲ್ಲೋಣ ಎಂದು ಬಿಜೆಪಿ ಮುಖಂಡ ರಾಜಶೇಖರಗೌಡ ಕಟ್ಟೇಗೌಡ ನುಡಿದರು.
ಅವರು ಬಿಜೆಪಿ ಸದಸ್ಯತಾ ಅಭಿಯಾನದ ಅಂಗವಾಗಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹೀರೂರು,ಹನುಮನಕೊಪ್ಪ,ಬಾಳೆಹಳ್ಳಿ,ಸಾವಿಕೇರಿ ಮತ್ತು ಶೃಂಗೇರಿ ಗ್ರಾಮಗಳಿಗೆ ಭೇಟಿ ನೀಡಿ ಸಭೆ ನಡೆಸಿ ಸದಸ್ಯತ್ವ ಅಭಿಯಾನದ ಕುರಿತು ಮಾಹಿತಿ ನೀಡಿ ಸದಸ್ಯತ್ವವನ್ನು ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು,ಮಾಜಿ ಶಾಸಕರು,ಹಾನಗಲ್ ಮಂಡಲದ ಅಧ್ಯಕ್ಷರು,ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ:ಗಣೇಶ.ಕೆ.