ಮಹಾತ್ಮ ಗಾಂಧಿ,ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಚಿಂತನೆಗಳು ಮಾನವೀಯತೆಗೆ ಸ್ಫೂರ್ತಿದಾಯಕವಾಗಿವೆ:-ರವಿ ಬಾಗಲಕೋಟೆ.

ಮಹಾತ್ಮ ಗಾಂಧಿ,ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಚಿಂತನೆಗಳು ಮಾನವೀಯತೆಗೆ ಸ್ಫೂರ್ತಿದಾಯಕವಾಗಿವೆ:-ರವಿ ಬಾಗಲಕೋಟೆ.
ಕೊಪ್ಪಳ:ಸತ್ಯಮಿಥ್ಯ (ಅ -04).
ಸ್ವಚ್ಛ ಭಾರತ್ ಮಿಷನ್ ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ನಿರ್ದೇಶನಲಯ ಬೆಂಗಳೂರು, ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣ ಪಂಚಾಯತ ಕಾರ್ಯಾಲಯ ಸಹಯೋಗದೊಂದಿಗೆ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಅಂಗವಾಗಿ ಭಾವಚಿತ್ರಕ್ಕೆ ಪೂಜಿಯನ್ನು ಸಮರ್ಪಿಸುವವರೊಂದಿಗೆ ಸ್ವಚ್ಛತೆಯ ಸೇವೆ, ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಕಾರ್ಯಕ್ರಮದ ಚಾಲನೆಯನ್ನು ಪಟ್ಟಣ ಪಂಚಾಯತ ಮುಖ್ಯ ಅಧಿಕಾರಿ ರವಿ ಬಾಗಲಕೋಟೆ ನೆರವೇರಿಸಿ ಮಾತನಾಡುತ್ತಾ ಮಹಾತ್ಮ ಗಾಂಧಿ, ಸತ್ಯ ಮತ್ತು ಅಹಿಂಸೆಯ ಪ್ರತಿರೂಪ, ಮತ್ತು ದೇಶದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ , ಪ್ರಾಮಾಣಿಕತೆ ಮತ್ತು ಸಮರ್ಪಣೆಯ ಸಂಕೇತ, ಅವರಿಗೆ ನಮನಗಳು. ಅವರ ಜನ್ಮ ವಾರ್ಷಿಕೋತ್ಸವದಂದು.
ಮಹಾತ್ಮ ಗಾಂಧಿಯವರ ತತ್ವಗಳು ಮತ್ತು ಸಿದ್ಧಾಂತಗಳು ನಮಗೆ ಯಾವಾಗಲೂ ಸ್ಫೂರ್ತಿಯ ಮೂಲವಾಗಿದೆ. ಸತ್ಯ ಮತ್ತು ಅಹಿಂಸೆಯ ಆಧಾರದ ಮೇಲೆ ರಾಷ್ಟ್ರವನ್ನು ಕಟ್ಟುವಲ್ಲಿ ಮಹಾತ್ಮ ಗಾಂಧಿಯವರು ನಿರ್ಣಾಯಕ ಪಾತ್ರವನ್ನು ವಹಿಸಿದ್ದಾರೆ ಮತ್ತು ಇಂದಿಗೂ ಅವರ ಚಿಂತನೆಗಳು ಮಾನವೀಯತೆಗೆ ಸ್ಫೂರ್ತಿದಾಯಕವಾಗಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಕಾರ್ಯಾಲಯದ ಸಿಬ್ಬಂದಿ ವರ್ಗದವರು, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಪಟ್ಟಣ ಪಂಚಾಯಿತಿ ಪೌರಕಾರ್ಮಿಕರು ಇತರರು ಇದ್ದರು.
ವರದಿ : ಚೆನ್ನಯ್ಯ ಹಿರೇಮಠ.