ರಾಜ್ಯ ಸುದ್ದಿ
ಗದಗ – ಜಿಲ್ಲೆಯಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿ 5 ವರ್ಷದ ಬಾಲಕ ಸಾವು.
ಆರೋಗ್ಯ ಇಲಾಖೆಯ ನಿರ್ಲಕ್ಷವೇ ಈ ಮಗುವಿನ ಸಾವಿಗೆ ಕಾರಣ ಎಂದು ಜನ ಆಕ್ರೋಶ ವ್ಯಕ್ತಪಡಿಸಿದರು

ಗದಗ – ಜಿಲ್ಲೆಯಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿ 5 ವರ್ಷದ ಬಾಲಕ ಸಾವು.
ಗದಗ:ಸತ್ಯಮಿಥ್ಯ ( ಜೂಲೈ -07).
ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣ ಹೆಚ್ಚುತ್ತಿವೆ. ಡೆಂಘೀ ಮಹಾಮಾರಿಗೆ ಮಕ್ಕಳು ಬಲಿಯಾಗುತ್ತಿರುವುದು ಆತಂಕ ಹೆಚ್ಚಿಸಿದೆ.ಗದಗ ಜಿಲ್ಲೆಯಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿಯಾಗಿದೆ.
5 ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಡೆಂಘೀ ಮಹಾಮಾರಿಗೆ ಬಲಿಯಾಗಿದ್ದಾನೆ. ಗದಗ ಜಿಲ್ಲೆಯ ಶಿರಂಜ ಗ್ರಾಮದ ಚಿರಾಯಿ ಹೊಸಮನಿ ಮೃತ ಬಾಲಕ.
ಕೆಲ ದಿನಗಳಿಂದ ಬಾಲಕ ತೀವ್ರ ಜ್ವರದಿಂದ ಬಳಲುತ್ತಿದ್ದ.ಗದಗ ಜಿಲ್ಲಾಸ್ಪತ್ರೆಗೆ ಬಾಲಕನನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಎಸ್ ಡಿ ಎಂ ಗೆ ದಾಖಲಿಸಲಾಗಿತ್ತು. ಆದರೆ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ.
ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ವರದಿ : ಮುತ್ತು.