ರಾಜ್ಯ ಸುದ್ದಿತಾಲೂಕು

ಜುಲೈ 13 ರಂದು ರಾಷ್ಟ್ರೀಯ ಲೋಕ ಅದಾಲತ್: ನ್ಯಾ. ಎಂ.ಆರ್.ಒಡೆಯರ್

ಪರಸ್ಪರ ಹೊಂದಾಣಿಕೆ ಮೂಲಕ ನ್ಯಾಯ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಿ.

Share News

ಪರಸ್ಪರ ಹೊಂದಾಣಿಕೆ ಮೂಲಕ ನ್ಯಾಯ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಿ.

ಕೊಪ್ಪಳ- ಸತ್ಯ ಮಿಥ್ಯ (ಜೂನ್ 18).

ಜುಲೈ 13 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರಿಯ ಲೋಕ್ ಅದಾಲತ್ ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ದಾವೆದಾರರು ಹಾಗೂ ಕಕ್ಷಿದಾರರು ಈ ಲೋಕ ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಲಕಾರಿ ರಾಮಪ್ಪ ಒಡೆಯರ್ ಅವರು ಹೇಳಿದರು.

ಜಿಲ್ಲಾ ನ್ಯಾಯಾಲಯದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಸಭಾಂಗಣದಲ್ಲಿ ಜೂನ್ 18 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಕಡಿಮೆ ಖರ್ಚಿನಲ್ಲಿ ಇಲ್ಲವೇ ಖರ್ಚು ಇಲ್ಲದೇ ಶೀಘ್ರ ತೀರ್ಮಾನಕ್ಕಾಗಿ ಲೋಕ್ ಅದಾಲತ್ ಒಂದು ವಿಶೇಷ ಅವಕಾಶವಾಗಿದೆ ಎಂದು ಅವರು ತಿಳಿಸಿದರು.

 

ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಮತ್ತು ಇತರ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ಆರ್.ಇ.ಆರ್.ಎ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ, ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳ ಬಗ್ಗೆ ಈ ಲೋಕ ಅದಾಲತ್‌ನಲ್ಲಿ ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.

ವರದಿ : ಹಿರೇಮಠ್


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!