ರಾಜ್ಯ ಸುದ್ದಿ

ಗುಡ್ಡ ಕುಸಿತ ಪ್ರಕರಣದಲ್ಲಿ ರಾಜಕೀಯ ಮಾಡುವುದಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ತಳ್ಳಿಹಾಕಿದ ಸಿದ್ದರಾಮಯ್ಯ.

Share News

ಗುಡ್ಡ ಕುಸಿತ ಪ್ರಕರಣದಲ್ಲಿ ರಾಜಕೀಯ ಮಾಡುವುದಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ತಳ್ಳಿಹಾಕಿದ ಸಿದ್ದರಾಮಯ್ಯ.

ಉತ್ತರ ಕನ್ನಡ : ಸತ್ಯಮಿಥ್ಯ ( ಜುಲೈ -21).

ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಭೇಟಿನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ.ಈ ಪ್ರಕರಣದಲ್ಲಿ ರಾಜಕಾರಣ ಮಾಡುವುದಿಲ್ಲ. ಈಗಾಗಲೇ ಗುಡ್ಡ ಕುಸಿತದ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ ತನ್ನ ನೆರವು ನೀಡಿದೆ.

ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ನಿಜಕ್ಕೂ ಶ್ಲಾಘನೀಯ.

ಶಿರೂರು ದುರಂತದಲ್ಲಿ ನೊಂದವರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ “ದುರಂತ ವಿಚಾರದಲ್ಲಿ ಯಾರು ರಾಜಕಾರಣ ಮಾಡುತ್ತಾರೋ ಬಿಡುತ್ತಾರೋ ಗೊತ್ತಿಲ್ಲಾ. ನಾನಂತು ರಾಜಕೀಯ ಮಾಡುವದಿಲ್ಲ.ಈಗಾಗಲೇ ಸಂತ್ರಸ್ತರಿಗೆ ಪರಿಹಾರ ನೀಡಲಾಗಿದೆ. ಒಂದುವೇಳೆ ಕಣ್ಮರೆಯಾದವರು ಮರಣ ಹೊಂದಿದ್ದರೆ ಅವರಿಗೆ ಪರಿಹಾರ ನೀಡಲಾಗುವದು ಎಂದರು.

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಹಲವು ದಿನಗಳಿಂದ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸ್ಥಳದಲ್ಲಿ ನಿಂತು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗಳು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದ್ದೇನೆ.

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು, ಅಗತ್ಯ ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದ್ದೇನೆ.

ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಿಂದ ಈ ಗುಡ್ಡ ಕುಸಿದಿದೆ ಎಂದು ಜನ ಮಾತನಾಡುತ್ತಿದ್ದಾರೆ. ಈ ಕುರಿತು ಕೇಂದ್ರ ಮಂತ್ರಿ ನಿತಿನ್ ಗಡ್ಕರಿಯವರಿಗೆ ವರದಿ ಕಳುಹಿಸಿಕೊಡುತ್ತೇನೆ ಎಂದರು

ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.‌

ವರದಿ : ವಿಶ್ವನಾಥ. ಕೆ.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!