ಸಿದ್ದರಾಮಯ್ಯಗೆ ಕಂಠಕವಾಗುತ್ತಾ ಸಿಬಿಐ ವಿಚಾರಣೆ?
ಬೆಂಗಳೂರು:ಸತ್ಯಮಿಥ್ಯ (ನ -05).
ರಾಜ್ಯದಲ್ಲಿ ಉಪಚುನಾವಣೆ ಕಾವು ರಂಗೇರುತ್ತಿರುವ ಸಂದರ್ಭದಲ್ಲಿ. ಆಡಳಿತಾರೂಢ ಮತ್ತು ವಿರೋಧ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪದಲ್ಲಿ ಮುಳುಗಿದ್ದಾರೆ. ಸಿದ್ದರಾಮಯ್ಯನವರ ಮುಡಾ ಹಗರಣ ಸಿಬಿಐ ಅಂಗಳಕ್ಕೆ ಹೋಗುವ ಸಾಧ್ಯತೆಗಳಿದ್ದು ಈ ಕುರಿತು ಸ್ನೇಹಮಹಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವಂಬರ್ 26 ಕ್ಕೆ ಮುಂದುಡಿದೆ.
ಮುಡಾ ಹಗರಣದ ತನಿಖೆಯನ್ನು ಈಗಾಗಲೇ ಕರ್ನಾಟಕ ಲೋಕಾಯುಕ್ತ ನಡೆಸುತ್ತಿದೆ. ಲೋಕಾಯುಕ್ತ ತನಿಖೆಯಲ್ಲಿ ಅನುಮಾನ ವ್ಯಕ್ತಪಡಿಸಿದ್ದ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ಈ ಸಂಬಂಧ ಸ್ನೇಹಮಯಿ ಕೃಷ್ಣ ಅವರು ಹೈರ್ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಇಂದು ಅರ್ಜಿ ವಿಚಾರಣೆಯನ್ನು ನಡೆಸಿತು.
ಪ್ರಕರಣ ಸಂಬಂಧ ನಡೆದ ತನಿಖೆಯ ವರದಿಯನ್ನು ನವೆಂಬರ್ 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಸಿಬಿಐ, ಲೋಕಾಯುಕ್ತ ಪೊಲೀಸರು, ಪ್ರಕರಣದ ಎ1ಆರೋಪಿ ಸಿಎಂ ಸಿದ್ದರಾಮಯ್ಯ ಮತ್ತು ಎ2 ಪಾರ್ವತಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿದೆ. ಸ್ನೇಹಪ್ರಿಯ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ವಾದಮಂಡನೆ ಮಾಡಿದರು. ಮತ್ತು ಲೋಕಾಯುಕ್ತ ಪರವಾಗಿ ರಾಜ್ಯ ಅಭಿಯೋಜಕ ಬಿ.ಎನ್. ಜಗದೀಶ್ ವಾದ ಮಂಡಿಸಿದರು.
ಮುಡಾ ಪ್ರಕರಣ ಸಿಬಿಐ ಅಂಗಳಕ್ಕೆ ಹೋಗಿದ್ದೆ ಆದರೆ ಕಾಂಗ್ರೆಸ್ ಪಕ್ಷಕ್ಕೆ ಬಹಳಷ್ಟು ಮುಜುಗರವಾಗುವುದರಿಂದ ಸ್ವಪಕ್ಷದಲ್ಲಿಯೇ ರಾಜೀನಾಮೆ ಕೂಗು ಕೇಳಬಹುದು.ಪ್ರಸ್ತುತ ಸಂದರ್ಭದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ನಾನು ಸ್ವಚ್ಛ ಚರಿತ್ರೆ ಹೊಂದಿದ್ದೇನೆ ಎನ್ನುವ ವಿಚಾರವನ್ನು ಬಹಳಷ್ಟು ವೇದಿಕೆಯಲ್ಲಿ ಪ್ರಸ್ತುತ ಪಡಿಸುತ್ತಿದ್ದಾರೆ. ಗ್ಯಾರಂಟಿ ಮಾತುಗಳು ಗೌಣವಾಗುತ್ತಿವೆ.
ಇತ್ತ ಬಿಜೆಪಿ ನಾಯಕರು ವಾಲ್ಮೀಕಿ ಹಗರಣ, ಮುಡಾ ಹಗರಣ, ವಖ್ಫ್ ಆಸ್ತಿ ಮತ್ತು ಸರ್ಕಾರಿ ನೌಕರನ ಆತ್ಮಹತ್ಯೆಯಲ್ಲಿ ಲಕ್ಶ್ಮಿ ಹೆಬ್ಬಾಳಕರ ಆಪ್ತನ ಹೆಸರು ಹೀಗೆ ಅನೇಕ ವಿಷಯಗಳನ್ನು ಪ್ರಸ್ತುತ ಪಡಿಸಿ ಮತ ಕೇಳುತ್ತಿವೆ.
ವರದಿ : ಚನ್ನು. ಎಸ್.