ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ದಕ್ಷತೆ ಮೆರೆಯುತ್ತಿರುವ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್ .ನೇಮಗೌಡ.
ಅಧಿಕಾರ ವಹಿಸಿಕೊಂಡ ಕೆಲವೇ ಅವಧಿಯಲ್ಲಿ ಜನಪ್ರಿಯತೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ದಕ್ಷತೆ ಮೆರೆಯುತ್ತಿರುವ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್ .ನೇಮಗೌಡ.
ಗದಗ : ಸತ್ಯ ಮಿಥ್ಯ ( ಜೂ -25)
ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿ. ಎಸ್. ನೇಮಗೌಡ ಅಧಿಕಾರವಹಿಸಿಕೊಂಡಾಗಿನಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ. ಹಲವಾರು ರೀತಿಯ ಕಠಿಣ ಕ್ರಮಗಳನ್ನು ತೆಗೆದುಕೊಂಡು ಜಿಲ್ಲೆಯಲ್ಲಿ ರೌಡಿಗಳ ಹಾಗೂ ಅಕ್ರಮ ಚಟುವಟಿಕೆಗಳನ್ನು ಕಡಿವಾಣ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲೆಯಲ್ಲಿ ನಡೆಯುವಂತಹ ಕೊಲೆ ದರೋಡೆ ಪ್ರಕರಣಗಳ ಕುರಿತಂತೆ ಆರೋಪಿಗಳನ್ನು ಹಿಡಿಯುವಲ್ಲಿ ಹಾಗೂ ಪ್ರಕರಣಗಳನ್ನು ಕಡಿಮೆ ಅವಧಿಯಲ್ಲಿ ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತಹ ಕಾರ್ಯದಲ್ಲಿ ಹೆಮ್ಮೆಯ ಪೊಲೀಸ್ ವರಿಷ್ಠಾಧಿಕಾರಿಗಳಾಗಿದ್ದಾರೆ.
ವರಿಷ್ಟಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಜನಪರ ಕೆಲಸಗಳನ್ನು ಮಾಡುವ ಮೂಲಕ ಜನಮನ ಗೆದ್ದಿರುವ ಪೊಲೀಸ್ ವರಿಷ್ಠಾಧಿಕಾರಿಗಳಾದ ಬಿ.ಎಸ್ ನೇಮಗೌಡ ಅವರಿಗೆ ಜಿಲ್ಲೆಯ ಜನತೆ ದೊಡ್ಡ ಸೆಲ್ಯೂಟ್ ಮಾಡುತ್ತಿದ್ದಾರೆ ಐಷಾರಾಮಿ ಕಾರುಗಳಲ್ಲಿ ಓಡಾಡಿ ಮಜಾ ಮಾಡುವ ಅಧಿಕಾರಿಗಳ ಮಧ್ಯೆ ಇಂತಹ ಅಧಿಕಾರಿಗಳು ನಮ್ಮ ನಡುವೆ ಇದ್ದಾರೆ ಬೇಸಿಗೆಯ ಕಾಲದಲ್ಲಿ ಬಿಸಿಲಿನ ಬೇಗೆಯಲ್ಲಿ ಒದ್ದಾಡುವ ವಾಹನ ಸವಾರರಿಗೆ ಟ್ರಾಫಿಕ್ ಸಿಗ್ನಲ್ನಲ್ಲಿ ಹಸಿರು ನರ್ಸರಿ ತಾರ್ಪಾಲಿನ್ ಹಾಕಿ ನೆರಳು ಕಲ್ಪಿಸಿಕೊಡುವ ನೂತನ ವ್ಯವಸ್ಥೆ ಮಾಡಿದ್ದು, ಇದಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ ಟ್ರಾಫಿಕ್ ಕಿರಿಕಿರಿ ಮತ್ತು ಬಿಸಿಲಿನಿಂದ ಬೇಸತ್ತ ಜನರಿಗೆ ಇದು ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಳ್ಳಲು ಉತ್ತಮ ವ್ಯವಸ್ಥೆಯಾಗಿತ್ತು ಎಷ್ಟೇ ಟ್ರಾಫಿಕ್ ಆದರೂ ಈ ಹಸಿರು ನರ್ಸರಿ ತಾರ್ಪಾಲಿನ್ ನೆರಳಿನಲ್ಲಿ ನಿಂತು ಸುಧಾರಿಸಿಕೊಂಡ ಬಳಿಕ ವಾಹನ ಸವಾರರು ಪ್ರಯಾಣವನ್ನು ಮುಂದುವರೆಸುತ್ತಿದರು ಮಾನವೀಯ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು.
ಸಾಮಾನ್ಯರು,ವೈದ್ಯರು, ಲಾಯರ್, ಪತ್ರಕರ್ತರು ಸೇರಿದಂತೆ ಅನೇಕರು ಮೊಬೈಲ್ ಕಳ್ಳತನದಿಂದ ತೊಂದರೆಗಿಡಾಗುತ್ತಿದ್ದರು. ಆ ಮೊಬೈಲ್ ಗಳನ್ನು ಖದೀಮರು ಜಾತ್ರೆ, ಸಂತೆ, ಬಸ್ ನಿಲ್ದಾಣ ಹೀಗೆ ವಿವಿಧ ಜನನಿಬಿಡ ಪ್ರದೇಶದಲ್ಲಿ ಅತೀ ಕಡಿಮೆ ಹಣಕ್ಕೆ ಅಂಗಡಿಗಳಲ್ಲಿ ಮೊಬೈಲ್ಗಳನ್ನು ಮಾರಿ ಪರಾರಿಯಾದ ಅನೇಕ ಪ್ರಕರಣಗಳನ್ನು ನಾವೂ ನೋಡಿದ್ದೇವೆ. ಇಂತಹ ಪ್ರಕರಣಗಳಿಗೆ ಕೇಂದ್ರ ಸರ್ಕಾರದ ಸಿ.ಇ.ಐ.ಆರ್ ಮತ್ತು ಮೋಬಿಫೈ” ಆ್ಯಪ್ಗಳ ಮೂಲಕ ಕ್ಷಿಪ್ರವಾಗಿ ಪತ್ತೆ ಮಾಡಿ ಮೊಬೈಲ್ಗಳನ್ನು ಪುನಃ ಆಯಾ ಮಾಲೀಕರಿಗೆ ಒಪ್ಪಿಸಿದರು. ಕಳೆದುಕೊಂಡಿದ್ದ ಮೊಬೈಲ್ಗಳು ಮತ್ತೆ ತಮ್ಮ ಕೈಸೇರುತ್ತಿದ್ದಂತೆಯೇ ಸಾರ್ವಜನಿಕರು ಸಂತೋಷ ವ್ಯಕ್ತಪಡಿಸಿ ಅನೇಕ ಪ್ರಸಂಗಗಳನ್ನು ನೋಡಿದ್ದೇವೆ.
ನಗರದಲ್ಲಿ ಅಪರಾಧಗಳನ್ನು ತಡೆಯಲು. ನಗರದ ಪ್ರಮುಖ ವೃತ್ತಗಳಲ್ಲಿ ಬೀದಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವ ಮೂಲಕ ರೌಡಿ ಗಳಿಗೂ ಹಾಗೂ ಅನೈತಿಕ ಚಟುವಟಿಕೆಗಳಲ್ಲಿ ತೊಡಗುವ ಅಪರಾಧಿಗಳನ್ನು ಮಟ್ಟ ಹಾಕಲು ಹೊಸ ಯೋಜನೆಯನ್ನು ಮಾಡುವ ಮೂಲಕ ನಗರದಲ್ಲಿ ಕಾನೂನಿನ ಸುವ್ಯವಸ್ಥೆಯನ್ನು ಮಾಡಿ ಅಪರಾಧಗಳಿಗೆ ಹಾಗೂ ರೌಡಿಗಳನ್ನು ನಡಕ ಹುಟ್ಟಿಸುವಂತಹ ಕಾರ್ಯ ಮಾಡಿದ ಬಿ.ಎಸ್ ನೇಮಗೌಡ ಅವರಿಗೆ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಯಿತು.
ಅಟೋ ಮಾಲಕರು ಮತ್ತು ಚಾಲಕರಿಗೆ ಕಾನೂನು ಅರಿವು ಮತ್ತು ರಸ್ತೆ ನಿಯಮಗಳ ಪಾಲನೆ ತಿಳುವಳಿಕೆ ಕುರಿತು ಕಾರ್ಯಕ್ರಮ ಏರ್ಪಡಿಸಿ ಎಲ್ಲಾ ಮಾಲೀಕ ಮತ್ತು ಚಾಲಕರಿಗೂ ಕಾನೂನು ಪಾಲಿಸುವುದು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಂಡು ಇಲಾಖೆಯೊಂದಿಗೆ ಕೈಜೋಡಿಸುವಂತೆ ಕರೆ ನೀಡಿದರು ಅಟೋ ಮಾಲಕರು ಮತ್ತು ಚಾಲಕರಿರು ಪೊಲೀಸ್ ವರಿಷ್ಠಾಧಿಕಾರಿಗಳಾದ ಬಿ.ಎಸ್ ನೇಮೇಗೌಡ ಅವರ ನಮ್ಮ ಮೇಲಿನ ಕಾಳಜಿಯ ಕಾರ್ಯಕ್ರಮಕ್ಕೆ ನಡೆಸಿದಕ್ಕೆ ಅವರ ಅಪಾರ ಪ್ರೀತಿಗೆ ನಾವು ಚಿರಋಣಿಯಾಗಿದ್ದೇವೆ ಎಂದು ಆಟೋ ಚಾಲಕ ಹಾಗೂ ಆಟೋ ಮಾಲೀಕರು ಹೇಳಿದರು ಅಲ್ಲದೆ ರಾತ್ರಿಯಲ್ಲಿ ಕುಡಿದ ಅಮಲಿನಲ್ಲಿ ಹಲವಾರು ಪ್ರಕರಣಗಳು ನಡೆಯುತ್ತಿದ್ದವು ಇದನ್ನು ಅರೆತ ಪೊಲೀಸ್ ವರಿಷ್ಠಾಧಿಕಾರಿಗಳು ರಾತ್ರಿ ವೇಳೆಯಲ್ಲಿ ಬಾರ್ ಅಂಗಡಿಗಳನ್ನು 10:00ಯ ಒಳಗಾಗಿ ಬಂದ್ ಮಾಡಿಸಿ ರಾತ್ರಿಯಲ್ಲಿ ನಡೆಯುತ್ತಿದ್ದ ಪ್ರಕರಣಗಳನ್ನು ಕಡಿಮೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಆಗುವ ರೀತಿಯಲ್ಲಿ ಎಲ್ಲರ ಸಲಹೆ ಸೂಚನೆಗಳನ್ನು ತೆಗೆದುಕೊಂಡು ಅಪರಾಧವನ್ನು ತಡೆಯಲು ಹಲವಾರು ರೀತಿಯ ಕಾರ್ಯಕ್ರಮಗಳನ್ನು ಮಾಡಿದ್ದಾರೆ ಅಲ್ಲದೆ ಅವರು ಪೊಲೀಸ ಸಿಬ್ಬಂದಿಗಳಲ್ಲಿ ಒಳ್ಳೆಯದ ರೀತಿಯ ಬಾಂಧವ್ಯವನ್ನು ನೀಡುತ್ತಿದ್ದು ಜಿಲ್ಲೆಯ ಎಲ್ಲಾ ಪೊಲೀಸ್ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಅವರ ಆಡಳಿತ ವೈಕರಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಪೊಲೀಸ್ ವರಿಷ್ಠಾಧಿಕಾರಿಗಳಾದರೂ ಸಾಮಾನ್ಯ ಜನರೊಂದಿಗೆ ಬೆರೆತು ಅವರು ಪ್ರೀತಿ ತೋರಿಸುವ ಆದರಕ್ಕೆ ಎಲ್ಲರೂ ಆಭಾರಿಯಾಗಿದ್ದಾರೆ ಇಂತಹ ಜನಪರ ಕಾರ್ಯಕ್ರಮಗಳನ್ನು ಮಾಡುತ್ತಿರುವ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಜಿಲ್ಲೆಯ ಜನತೆ ದೊಡ್ಡ ಸೆಲ್ಯೂಟ್ ಮಾಡುತ್ತಿದ್ದಾರೆ.
ಲೇಖನ: ಮುತ್ತು ಗೋಸಲ