ರಾಜ್ಯ ಸುದ್ದಿ

ಜುಲೈ 10 ಕಾರ್ಮಿಕ ಬೇಡಿಕೆ ದಿನ CITU.

Share News

ಜುಲೈ 10 ಕಾರ್ಮಿಕ ಬೇಡಿಕೆ ದಿನ CITU.

ಗಜೇಂದ್ರಗಡ:ಸತ್ಯಮಿಥ್ಯ ( ಜೂಲೈ -10).

ಇಂದು ನಗರದ  ತಹಸೀಲ್ದಾರ್ ಕಚೇರಿ ಎದುರು ಸಿ ಐ ಟಿ ಯು ನ ಕಾರ್ಯಕರ್ತರು ಹೋರಾಟ ಮಾಡಿ ಮಾನ್ಯ ತಹಶಿಲ್ದಾರರ ಮೂಲಕ ಮಾನ್ಯ ಮುಖ್ಯಮಂತ್ರಿ ಕರ್ನಾಟಕ ಸರ್ಕಾರ ಬೆಂಗಳೂರು ಇವರಿಗೆ ಮತ್ತು ಮಾನ್ಯ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿ ವರ್ಷವೂ ಕಾರ್ಮಿಕರು ತಮ್ಮ ಬೇಡಿಕೆ ದಿನವೆಂದು ಜುಲೈ 10 ರಂದು ತಮ್ಮ ಬೇಡಿಕೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತಾ ಬಂದಿದ್ದಾರೆ ಅದರಂತೆ ಈ ವರ್ಷವೂ ಬೇಡಿಕೆ ದಿನದಂದು CITU ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಬೇಡಿಕೆಗಳ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಮುಖ್ಯ ಬೇಡಿಕೆಗಳು 

ನಾಲ್ಕು ಕಾರ್ಮಿಕ ಸಂಹಿತೆಗಳನ್ನು (Labour Code) ಹಿಂಪಡೆಯಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ, ಬಡವರಿಗೆ ಬದುಕಲು ಅವಕಾಶ ಕಲ್ಪಿಸುವ ನೀತಿಗಳನ್ನು ಜಾರಿಗೆ ತರಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಕೃಷಿ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತರಿಪಡಿಸಬೇಕು. ಎಪಿಎಂಸಿ ವ್ಯವಸ್ಥೆಯನ್ನು ಬಲಗೊಳಿಸಬೇಕು. ಗೊಬ್ಬರ ಒಳಗೊಂಡಂತೆ ಕೃಷಿ ಇಡುವಳಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈಬಿಡಬೇಕು. ದೇಶದ ಐಕ್ಯತೆಯನ್ನು ಛಿದ್ರಗೊಳಿಸುವ, ಸೌಹಾರ್ದತೆಯನ್ನು ಹಾಳುಮಾಡುವ ಕೃತ್ಯಗಳನ್ನು ಹಾಗು ಶಕ್ತಿಗಳನ್ನು ನಿಗ್ರಹಿಸಬೇಕು. ಸಂವಿಧಾನದ ಧರ್ಮನಿರಪೇಕ್ಷ ಮೌಲ್ಯಗಳನ್ನು ಸಂರಕ್ಷಿಸಬೇಕು. ರೈಲ್ವೆ, ವಿದ್ಯುತ್ ಒಳಗೊಂಡು ಎಲ್ಲಾ ಸಾರ್ವಜನಿಕ ಕ್ಷೇತ್ರಗಳ ಎಲ್ಲಾ ಸ್ವರೂಪದ ಖಾಸಗಿಕರಣವನ್ನು ಕೈಬಿಡಬೇಕು. ಸಾರ್ವಜನಿಕ ರಂಗದ ಕೈಗಾರಿಕೆ ಹಾಗು ಸೇವೆಗಳನ್ನು ಬಲಪಡಿಸಬೇಕು. ಓ.ಒಂ ರದ್ದು ಮಾಡಿ. ಕನಿಷ್ಟ ವೇತವನ್ನು ಅಕುಶಲ ಕಾರ್ಮಿಕರಿಗೆ ರೂ 31,000/- ಹಾಗು ಹೆಚ್ಚಿನ ಕೌಶಲ್ಯದ ಪ್ರತಿ ಹಂತಕ್ಕೆ ಶೇ. 15% ಹೆಚ್ಚಳದೊಂದಿಗೆ ನಿಗದಿಪಡಿಸಬೇಕು. ಗ್ರಾಹಕ ಬೆಲೆ ಸೂಚ್ಯಾಂಕದ ಪ್ರತಿ ಅಂಶದ ಹೆಚ್ಚಳಕ್ಕೆ ಪ್ರತಿ ದಿನಕ್ಕೆ 6ಪೈಸೆಗಳ ತುಟ್ಟಿಭತ್ಯೆ ನಿಗಧಿಪಡಿಸಬೇಕು. ಬೆಲೆ ಸೂಚ್ಯಾಂಕವನ್ನು ಪ್ರಾಮಾಣಿಕವಾಗಿ ಪ್ರಕಟಿಸಬೇಕು. ಸರ್ವೋಚ್ಚ ನ್ಯಾಯಾಲಯದ ತೀರ್ಪಿನನ್ವಯ ವೈಜ್ಞಾನಿಕ ರೀತಿಯಲ್ಲಿ ಕನಿಷ್ಟ ವೇತನವನ್ನು ನಿಗದಿಪಡಿಸಿ ಸಮರ್ಪಕವಾಗಿ ಜಾರಿಗೊಳಿಸಬೇಕು. ಕೆಲಸದ ಅವಧಿಯನ್ನು ವಾರಕ್ಕೆ ಗರಿಷ್ಟ 36 ಗಂಟೆಗಳು ಹಾಗು ದಿನದ ಪಾಳಿಯನ್ನು 6 ಗಂಟೆಗಳಿಗೆ ಮಿತಿಗೊಳಿಸಬೇಕು ಹಾಗೂ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲು ಗಮನ ನೀಡಬೇಕು. ನಮ್ಮ ಸಂವಿಧಾನದ ಪರಿಚ್ಛೇದ 39 (ಡಿ) ನಲ್ಲಿ ಪ್ರತಿಪಾದಿಸಿರುವ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಖಾತ್ರಿಪಡಿಸಬೇಕು. ಕಡಿಮೆ ವೇತನ ನೀಡುತ್ತಾ ಗುತ್ತಿಗೆ-ಹೊರಗುತ್ತಿಗೆ ಹಾಗು ಹಂಗಾಮಿ ನೌಕರರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ಕೊನೆಗಾಣಿಸಬೇಕು. ದೀರ್ಘಕಾಲಿಕ ಸ್ವರೂಪದಲ್ಲಿರುವ ಎಲ್ಲಾ ರೀತಿಯ ಉದ್ಯೋಗಗಳಲ್ಲಿ ಗುತ್ತಿಗೆ ಕಾರ್ಮಿಕ ವ್ಯವಸ್ಥೆಯನ್ನು ರದ್ದುಪಡಿಸಬೇಕು ಮತ್ತು ದೀರ್ಘಕಾಲಿಕ ಮತ್ತು ಖಾಯಂ ಸ್ವರೂಪದಲ್ಲಿ ಕೆಲಸ ಮಾಡುವ ಗ್ರಾಮಪಂಚಾಯಿತಿ, ಮುನಿಸಿಪಾಲಿಟಿ ಹಾಗೂ ಎಲ್ಲ ಕೈಗಾರಿಕೆಗಳಲ್ಲಿನ ಗುತ್ತಿಗೆ ಹಾಗು ತಾತ್ಕಾಲಿಕ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಲು ತಮಿಳುನಾಡು ಮತ್ತು ಆಸ್ಸಾಂ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು..

 

ಇಎಸ್‌ಐ, ಇಪಿಎಫ್, ಗ್ರಾಚ್ಯುಟಿ, ಬೋನಸ್ ಕಾಯಿದೆಯಲ್ಲಿ ವಿಧಿಸಲಾದ ಎಲ್ಲಾ ವೇತನ ಮಿತಿಗಳನ್ನು ತೆರೆವುಗೊಳಿಸಬೇಕು. ಈ ಸವಲತ್ತುಗಳನ್ನು ಎಲ್ಲಾ ಕಾರ್ಮಿಕರಿಗೂ ವಿಸ್ತರಿಸಬೇಕು. ಪ್ರತಿ ಕೈಗಾರಿಕಾ ವಲಯ ಮಟ್ಟದಲ್ಲಿ/ತಾಲೂಕು ಮಟ್ಟದಲ್ಲಿ ಇಎಸ್‌ಐ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವ ಮೂಲಕ ಉಚಿತ ವೈದ್ಯಕೀಯ ಸೌಲಭ್ಯವನ್ನು ಖಾತ್ರಿಪಡಿಸಬೇಕು. ಇಪಿಎಫ್ ನಿವೃತಿ ವೇತನವನ್ನು ಕಡೆಯದಾಗಿ ಪಡೆದ ಪೂರ್ಣ ವೇತನಕ್ಕೆ ಸಮನಾಗಿ ಹಾಗು ತುಟ್ಟಿಭತ್ಯೆಯೊಂದಿಗೆ ನಿಗದಿಪಡಿಸಬೇಕು. -ಗ್ಯಾಚ್ಯುಟಿಯನ್ನು ಪ್ರತಿ ವರ್ಷದ ಸೇವೆಗೆ 30 ದಿನಗಳ ವೇತನ, ಕಾರ್ಖಾನೆಯನ್ನು ಮುಚ್ಚುವಾಗ ಅಥವಾ ರಿಟ್ರಂಚೆಂಟ್ ಮಾಡುವಾಗ ನೀಡಬೇಕಾದ ಪರಿಹಾರ ಮೊತ್ತವನ್ನು ಪ್ರತಿ ವರ್ಷದ ಸೇವೆಗೆ 15 ದಿನಗಳಿಂದ 90 ದಿನಗಳಿಗೆ ಹೆಚ್ಚಿಸಬೇಕು. ಇಕಿಈ.ಇಕಮಿ.ಇಆಐಖೆ ಬಾಕಿಗಳನ್ನು ನೀಡದಿರುವ ಉದ್ಯೋಗದಾತರ ಮೇಲಿನ ದಂಡ ಶುಲ್ಕವನ್ನು ಕಡಿಮೆ ಮಾಡುವ ಅಧಿಸೂಚನೆಗಳನ್ನು ರದ್ದುಗೊಳಿಸಿ.

NPS ರದ್ದುಗೊಳಿಸಿ OPS ಮರುಸ್ಥಾಪಿಸಿ. EPS ಪಿಂಚಣಿದಾರರಿಗೆ ಕನಿಷ್ಠ ರೂ. 9,000 ಪಿಂಚಣಿಯನ್ನು ಖಚಿತಪಡಿಸಿ. ಪ್ರತಿ ಜಿಲ್ಲಾ ಮಟ್ಟದಲ್ಲಿ ಕಾರ್ಮಿಕ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಕೈಗಾರಿಕಾ ವಿವಾದಗಳನ್ನು ನಿರ್ಧಿಷ್ಟವಾಗಿ ಕಾಲಮಿತಿಯೊಳಗೆ ಇತ್ಯರ್ಥಗೊಳ್ಳಲು ಸೂಕ್ತ ಕಾನೂನು ತಿದ್ದುಪಡಿಗಾಗಿ ಕ್ರಮಕೈಗೊಳ್ಳಬೇಕು. ದೇಶದ ಎಲ್ಲಾ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಚಿಸಲಾಗಿರುವ ಸಾಮಾಜಿಕ ಭದ್ರತಾ ಮಂಡಳಿಯನ್ನು ಬಲಪಡಿಸಿ ಕೇಂದ್ರ ಸರ್ಕಾರ ವಾರ್ಷಿಕ ನಿವ್ವಳ ಆದಾಯದ ಶೇ 3 ರಷ್ಟು ಅನುದಾನ ಅಂದರೆ 3 ಲಕ್ಷ ಕೋಟಿ ಹಣವನ್ನು ಅಸಂಘಟಿತ ಕಾರ್ಮಿಕರ ಕಾರ್ಯಕ್ರಮಗಳಿಗೆ ಘೋಷಿಸಬೇಕು. ಇ- ಶ್ರಮ್ ಯೋಜನೆಯಲ್ಲಿ ಗುರುತಿನ ಚೀಟಿ ಪಡೆದಿರುವ ಎಲ್ಲ ಅಸಂಘಟಿತ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಸದಸ್ಯರಿಗೆ ಉಚಿತ ಶಿಕ್ಷಣ, ಆರೋಗ್ಯ, ಪಡಿತರ ಹಾಗೂ ವಸತಿ ಯೋಜನೆಯನ್ನು ಜಾರಿಗೊಳಿಸಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿ ಮಾಡುತ್ತಿರುವ ವಿವಿಧ ವಸತಿ ಯೋಜನೆಗಳನ್ನು ಬಳಸಿಕೊಂಡು ರಾಜ್ಯದಲ್ಲಿರುವ ಎಲ್ಲಾ ಅಸಂಘಟಿತ ಕಾರ್ಮಿಕರಿಗೂ ಒಂದು ನಿರ್ಧಿಷ್ಟ ಕಾಲಮಿತಿಯೊಳಗೆ ವಸತಿ ಯೋಜನೆಯನ್ನು ಜಾರಿಗೊಳಿಸಬೇಕು. ಕೇಂದ್ರ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಕಾನೂನು-1996 ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸೆಸ್ ಕಾನೂನು-1996ಗಳನ್ನು ಉಳಿಸಬೇಕು. ಕಲ್ಯಾಣ ಮಂಡಳಿಗಳಲ್ಲಿ ಇರುವ ನಿಧಿಯನ್ನು ಕಟ್ಟಡ ಕಾರ್ಮಿಕ ಸೌಲಭ್ಯಗಳಿಗೆ ಮಾತ್ರ ಬಳಸಬೇಕು. ಮಂಡಳಿ ಬಾಕಿ ಇರುವ ಸೆಸ್ ಕಡ್ಡಾಯವಾಗಿ ಸಂಗ್ರಹಿಸಬೇಕು ಮತ್ತು ಇತರೆ ಉದ್ದೇಶಗಳಿಗೆ ನಿಧಿ ಬಳಕೆ ಮಾಡಬಾರದು. ಕರ್ನಾಟಕ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಫಲಾನುಭವಿಗಳ ಮಕ್ಕಳಿಗೆ ನೀಡುತ್ತಿರುವ ಶೈಕ್ಷಣಿಕ ಧನ ಸಹಾಯ ಕಡಿತ ಆದೇಶ ಹಿಂಪಡೆದು ಹಿಂದಿನಂತೆ ಧನಸಹಾಯ ಮುಂದುವರೆಸಬೇಕು. ಬಾಕಿರುವ ನೂರಾರು ಪಿಂಚಣಿ, ಮದುವೆ, ಶೈಕ್ಷಣಿಕ, ವೈದ್ಯಕೀಯ ಮೊದಲಾದ ಅರ್ಜಿಗಳನ್ನು ಇತ್ಯರ್ಥಪಡಿಸಿಸಬೇಕು. ಹಾಗೂ ಎಲ್ಲ ಸೌಲಭ್ಯಗಳಿಗೂ ವಯಸ್ಸಿನ ಮಿತಿಯನ್ನು ರದ್ದುಗೊಳಿಸಬೇಕು ಹಾಗೂ ಮನೆ ನಿರ್ಮಾಣಕ್ಕಾಗಿ ಸಹಾಯಧನ ನೀಡಬೇಕು. ವಿಮೆ ಏಜೆಂಟರನ್ನು ಅಸಂಘಟಿತ ಕಾರ್ಮಿಕರೆಂದು ಪರಿಗಣಿಸಿ ಕಲ್ಯಾಣ ನಿಧಿ, ಪಿಂಚಣಿ ಯೋಜನೆಗಳನ್ನು ಜಾರಿಮಾಡಬೇಕು.

ಬೀಡಿಕಾರ್ಮಿಕರಿಗೆ ಪರ್ಯಾಯ ಉದ್ಯೋಗ, ಪರಿಹಾರ ಯೋಜನೆ ರೂಪಿಸಬೇಕು. ವಿದ್ಯಾರ್ಥಿ ವೇತನ ಹಾಗು ಇತರೆ ಕಲ್ಯಾಣ ಯೋಜನೆಗಳ ಸಮರ್ಪಕ ಜಾರಿಗೆ ಅನುವಾಗುವಂತೆ ಕೇಂದ್ರ ಸರ್ಕಾರವು ಜಿಎಸ್‌ಟಿಯಿಂದ ಕಲ್ಯಾಣ ನಿಧಿಗೆ ಪಾಲು ನೀಡಬೇಕು. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ವಾರ್ಷಿಕ 200 ದಿನಗಳು ಹಾಗು ದಿನಕ್ಕೆ ರೂ 700/- ವೇತನದೊಂದಿಗೆ ವಿಸ್ತಾರಗೊಳಿಸಬೇಕು. ನಗರ ಪ್ರದೇಶಕ್ಕು ಉದ್ಯೋಗ ಖಾತರಿ ಯೋಜನೆಯನ್ನು ವಿಸ್ತರಿಸಬೇಕು. ಆರೋಗ್ಯ ಹಾಗು ಪೌಷ್ಠಿಕ ಆಹಾರ ಪೂರೈಸುವು ಐಸಿಡಿಎಸ್, ಎಂಡಿಎಂ, ಎನ್‌ಹೆಚ್‌ಎಂ, ಐಸಿಪಿಎಸ್, ಎಸ್‌ಎಸ್‌ಎ ಮುಂತಾದ ಯೋಜನೆಗಳನ್ನು ಮುಂದುವರಿಸಬೇಕು. ಕಳೆದ ಬಜೆಟ್‌ಗಳಲ್ಲಿ ಕಡಿತಗೊಳಿಸಿರುವ ಅನುದಾನಗಳನ್ನು ಮರುಪಾವತಿ ಮಾಡುವುದು ಹಾಗು ಯೋಗ್ಯ ಅನುದಾನವನ್ನು ಕೊಡುವ ಮೂಲಕ ಈ ಯೋಜನೆಗಳನ್ನು ಸ್ಥಿರಗೊಳಿಸಬೇಕು. ಕೇಂದ್ರ ಹಾಗು ರಾಜ್ಯ ಸರ್ಕಾರದ ಅನುದಾನವನ್ನು ಕ್ರಮಬದ್ಧವಾಗಿ 90:10 ಎಂಬ ಅನುಪಾತದೊಂದಿಗೆ ನೀಡಬೇಕು. ಆಹಾರ, ಆರೋಗ್ಯ, ಶಿಕ್ಷಣ ಮತ್ತು ಪೌಷ್ಠಿಕ ಆಹಾರಕ್ಕಾಗಿರುವ ಯೋಜನೆಗಳಾದ ಐಸಿಡಿಎಸ್, ಎಂಡಿಎಂ, ಎನ್‌ಹೆಚ್‌ಎಂ. ಐಸಿಪಿಎಸ್, ಎಸ್ಎಸ್ಎ, ಎಂಎನ್‌ಆರ್‌ಇಜಿ ಮುಂತಾದ ಯೋಜನೆಗಳನ್ನು ಖಾಯಂ ಮಾಡುವ ಮುಖಾಂತರ ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು. ಭಾರತೀಯ ಕಾರ್ಮಿಕ ಸಮ್ಮೇಳನ(ಐಎಲ್‌ಸಿ)ಯ ಶಿಫಾರಸ್ಸಿನಂತೆ ಈ ಯೋಜನೆಗಳಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳು ಸೇರಿದಂತೆ 1 ಕೋಟಿ ನೌಕರರಿಗೆ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು ಕೊಟ್ಟು ನೌಕರರು ಎಂದು ಪರಿಗಣಿಸಬೇಕು. 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ಕೊಡಲು ಕಾನೂನು ರೂಪಿಸಬೇಕು. NEP ನಿಲ್ಲಿಸಬೇಕು. ಈ ಯೋಜನೆಗಳಲ್ಲಿ ದುಡಿಯುವ ಗುತ್ತಿಗೆ, ಒಳಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಿ. ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ ಮಾಡಬೇಕು. 49 ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರು 20 ವರ್ಷಗಳಿಂದ ದುಡಿಯುವ ಬಿಸಿಯೂಟ ನೌಕರರಿಗೆ, ಆಶಾ ಮತ್ತು ಇತರೆ ಸಿಬ್ಬಂದಿಗಳಿಗೆ. 31 ಸಾವಿರ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು ಕನಿಷ್ಟ 10 ಸಾವಿರ ಪಿಂಚಣಿ ಕೊಡಬೇಕು. ಗಿಗ್ ಹಾಗು ಪ್ಲಾಟ್ ಫಾರಂಗಳ ಮೂಲಕ ಕೆಲಸ ನಿರ್ವಹಿಸುವವರನ್ನು ಕಾರ್ಮಿಕರೆಂದು ಪರಿಗಣಿಸಿ ಕಾರ್ಮಿಕ ಕನೂನುಗಳ ರಕ್ಷಣೆ ಹಾಗು ಸವಲತ್ತುಗಳನ್ನು ಖಾತರಿಪಡಿಸಬೇಕು. ಸಾರಿಗೆ ಕ್ಷೇತ್ರದಲ್ಲಿ ದುಡಿಯುತ್ತಿರುವ ಲಕ್ಷಾಂತರ ಕಾರ್ಮಿಕರಿಗೆ ಕೂಡಲೇ ಕಲ್ಯಾಣ ಮಂಡಳಿ ಆರಂಭಿಸಿ ನೋಂದಣಿ ಆರಂಭಿಸಿ ಸೌಲಭ್ಯಗಳನ್ನು ಜಾರಿಗೊಳಿಸಬೇಕು ಕಾರ್ಮಿಕ ಕಾಯಿದೆಗಳಿಂದ IT ಮತ್ತು ITES ಗೆ ವಿನಾಯಿತಿ ನೀಡುವ ಅಧಿಸೂಚನೆಗಳನ್ನು ರದ್ದುಗೊಳಿಸಿ ಎಂದು ಬೇಡಿಕೆ ಪಟ್ಟಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಪೀರು ರಾಠೋಡ್, ಮೈಬು ಹವಾಲ್ದಾರ್, ಗಣೇಶ ರಾಠೋಡ್, ಚಂದ್ರು ರಾಠೋಡ್, ನೀಲಮ್ಮ ಹೀರೆಮಠ, ಶರಣಮ್ಮ ವಾಲಿ, ರಾಚಮ್ಮ ಗದಗಿನಮಠ, ಗಂಗವ್ವ ಪಾಟೀಲ್, ಮಲ್ಲವ್ವ ಇಬುತಿ, ಅನ್ನಪೂರ್ಣ ಬೆನಹಾಳ್, ಗೀತಾ ವಾಲಿಕಾರ್, ಪವಿತ್ರ ಡೊಳ್ಳಿನ, ರಂಜಿತಾ ಕುಲಕರ್ಣಿ, ಶಶಿಕಲಾ ಮತ್ತು ಇತರರು ಹಾಜರಿದ್ದರು.

ವರದಿ : ಸುರೇಶ ಬಂಡಾರಿ.


Share News
ನಿಜವಾದ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಕ್ಕೆ ಬಲ ತುಂಬಲು ನೆರವು ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ Scan Code ಮೂಲಕ ನೆರವು ನೀಡಿ

Related Articles

Leave a Reply

Your email address will not be published. Required fields are marked *

Back to top button
error: Content is protected !!