
ಥ್ರೋಬಾಲ್ ಪಂದ್ಯಾವಳಿ – ಜಿಲ್ಲಾ ಮಟ್ಟಕ್ಕೆ ಆಯ್ಕೆ.
ಕೊಪ್ಪಳ:ಸತ್ಯಮಿಥ್ಯ (ಸೆ-11).
2025-26 ನೇ ಸಾಲಿನ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಕರ್ಕಿಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಥ್ರೋಬಾಲ್ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಥ್ರೋಬಾಲ್ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಸತತವಾಗಿ ಎರಡನೇ ಬಾರಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ ಹಾಗೂ ಬಾಲಕಿಯರ ವಿಭಾಗದಲ್ಲಿ ಸತತವಾಗಿ ಎರಡನೇ ಬಾರಿಗೆ ಪ್ರಥಮ ಸ್ಥಾನ ಪಡೆದು ಮುಂಬರುವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲೆಗೆ ಕೀರ್ತಿ ತಂದ ಈ ಎಲ್ಲಾ ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಉತ್ತಮವಾಗಿ ತರಬೇತಿ ನೀಡಿದ ಶಾಲೆಯ ದೈಹಿಕ ಶಿಕ್ಷಕರಾದ ಶ್ರೀ ಮರ್ದಾನಲಿ ರವರು ಹರ್ಷ ವ್ಯಕ್ತಪಡಿಸಿದ್ದಾರೆ.
ಥ್ರೋಬಾಲ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಕರಾದ ಶ್ರೀ ಮರ್ದಾನಲಿ ರವರಿಗೆ, ಸಹಕಾರ ಹಾಗೂ ಪ್ರೋತ್ಸಾಹ ನೀಡಿದ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಹೋಳಿಬಸಯ್ಯ ಕಟ್ರಳ್ಳಿಮಠ, ಸಮಸ್ತ ಶಿಕ್ಷಕ/ಶಿಕ್ಷಕಿಯರು, ಮಕ್ಕಳ ಜಾಗೃತಿ ಸಂಸ್ಥೆ ಬೆಂಗಳೂರು ಸಿಬ್ಬಂದಿ ವರ್ಗದವರು, ಪಾಲಕರು, ಊರಿನ ಗುರು ಹಿರಿಯರು, ಹಳೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು, ಯುವಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ, ಶುಭಾಶಯ ಕೋರಿದ್ದಾರೆ.
ವರದಿ : ಮುತ್ತು ಗೋಸಲ.