
ವಿಡಿಎಸ್ ಕ್ಲಾಸಿಕ್ ಸಿಬಿಎಸ್ಇ ಶಾಲೆಯಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ.
ಗದಗ:ಸತ್ಯಮಿಥ್ಯ (ಆ-23).
ನಗರದ ಶತಮಾನ ಪೂರೈಸಿದ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿದ್ಯಾದಾನ ಸಮಿತಿಯ ಕ್ಲಾಸಿಕ್ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲೆಯ ಶೈಕ್ಷಣಿಕ ಮಾರ್ಗದರ್ಶಕರಾದ ಶ್ರೀ ಪ್ರತೀಕ. ಎಸ್. ಹುಯಿಲಗೋಳ ರವರು ರಾಷ್ಟ್ರೀಯ ಬಾಹ್ಯಾಕಾಶ ದಿನ ಬಾಹ್ಯಾಕಾಶ ಅನ್ವೇಷಣೆಯಲ್ಲಿ ಭಾರತದ ಸಾಧನೆಗಳನ್ನು ಸಂಭ್ರಮಿಸಿ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿನ ಪ್ರಗತಿಯನ್ನು ದೇಶಕ್ಕೆ ತೋರಿಸುತ್ತದೆ. ಅದರೊಡನೆ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತು ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸುವ ಗುರಿಯನ್ನು ಹೊಂದಿದೆ. ದೇಶದ ಬಾಹ್ಯಾಕಾಶ ಪರಿಶೋಧನೆಯು ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲಾಗಿದೆ. ಇಸ್ರೋದ ವಿಶ್ರಾಂತ ವಿಜ್ಞಾನಿಗಳಾದ ಹಾಗೂ ನಮ್ಮ ಸಂಸ್ಥೆಯ ಹಳೆ ವಿದ್ಯಾರ್ಥಿಗಳಾದ ಶ್ರೀ ಸುಧೀಂದ್ರ ಬಿಂದಗಿ ಹಾಗೂ ಇನ್ನೋರ್ವ ವಿಜ್ಞಾನಿಗಳಾದ ಶ್ರೀ ಶ್ರೀನಿವಾಸ ಹುಯಿಲಗೋಳ ರವರು ಚಂದ್ರಯಾನ 3 ಯಶಸ್ವಿ ಉಡಾವಣೆಗೆ ಸೇವೆ ಸಲ್ಲಿಸಿ ಕಾರ್ಯಾಚರಣೆಗೆ ಕಾರಣರಾಗಿದ್ದಾರೆ. ಇಂತಹ ಹೆಮ್ಮೆಯ ಶಿಕ್ಷಣ ಸಂಸ್ಥೆಯಲ್ಲಿ ಅಭ್ಯಾಸ ಮಾಡುತ್ತಿರುವ ನೀವೆಲ್ಲಾ ಭಾಗ್ಯವಂತರು ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಶಾಲೆಯ ಪ್ರಾಚಾರ್ಯರಾದ ಶ್ರೀ ಎಂ. ಆರ್. ಡೊಳ್ಳಿನ ರವರು ಭಾರತ ಸರ್ಕಾರ ಚಂದ್ರಯಾನ-3 ಯೋಜನೆಯ ಯಶಸ್ಸನ್ನು ಸ್ಮರಿಸುವ ಸಲುವಾಗಿ ಆಗಸ್ಟ್ 23 ರಂದು “ರಾಷ್ಟ್ರೀಯ ಬಾಹ್ಯಾಕಾಶ ದಿನ” ಎಂದು ಆಚರಿಸುವುದಾಗಿ ಘೋಷಿಸಿತು. 2023 ರ ಈ ದಿನದಂದು ಚಂದ್ರಯಾನ-3 ರ ‘ವಿಕ್ರಂ ಲ್ಯಾಂಡರ್’ ಚಂದ್ರನ ಮೇಲೆ ‘ಶಿವಶಕ್ತಿ ಬಿಂದು’ವಿನಲ್ಲಿ ಸುರಕ್ಷಿತ ಮತ್ತು ಹಗುರವಾದ ಲ್ಯಾಂಡಿಂಗ್ ನಡೆಸಿತು. ಬಳಿಕ ಪ್ರಗ್ಯಾನ್ ರೋವರ್ ಚಂದ್ರನ ಅಂಗಳದಲ್ಲಿ ಕಾರ್ಯಚರಿಸಿತು. ಇದು ಜಾಗತಿಕ ಬಾಹ್ಯಾಕಾಶ ಪರಿಶೋಧನೆಗೆ ಇಸ್ರೋ ನೀಡಿದ ಕೊಡುಗೆಗಳನ್ನು ಎತ್ತಿ ತೋರಿಸುತ್ತದೆ. ಈ ದಿನವು ಭವಿಷ್ಯದ ವಿಜ್ಞಾನಿಗಳನ್ನು ಪ್ರೇರೇಪಿಸಲು ಮತ್ತು ಸಮಾಜದ ಮೇಲೆ ಬಾಹ್ಯಾಕಾಶ ತಂತ್ರಜ್ಞಾನದ ಪ್ರಭಾವದ ಬಗ್ಗೆ ಜಾಗೃತಿ ಮೂಡಿಸಲು ರಾಷ್ಟ್ರವ್ಯಾಪಿ ಘಟನೆಗಳು ಶೈಕ್ಷಣಿಕ ಕಾರ್ಯಕ್ರಮಗಳು ಮತ್ತು ಪ್ರದರ್ಶನಗಳನ್ನು ಒಳಗೊಂಡಿದೆ. ಚಂದ್ರಯಾನ-3 ರ ಮಿಷನ್ ನ ಮಹತ್ವದ ಸಾಧನೆಯನ್ನು ಗೌರವಿಸಲು ಪ್ರಧಾನಿಯವರು ಭಾರತದಲ್ಲಿ ಆಗಸ್ಟ್ 23 ಈ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಘೋಷಿಸಿದರು. 2023 ಆಗಸ್ಟ್ 23 ರಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರನ ದಕ್ಷಿಣ ಧ್ರುವದ ಬಳಿ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಇಳಿಸುವ ಮೂಲಕ ಇತಿಹಾಸವನ್ನು ನಿರ್ಮಿಸಿತು. ಭಾರತವನ್ನು ಚಂದ್ರನ ಮೇಲೆ ಇಳಿಸಿದ ನಾಲ್ಕನೇ ರಾಷ್ಟ್ರಾವಾಯಿತು. ಈ ಸಾಧನೆಯು ಭಾರತದ ಅಂತರಾಷ್ಟ್ರೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ವಿಸ್ತರಿಸುತ್ತಿರುವ ಸಾಮರ್ಥ್ಯಗಳನ್ನು ಎತ್ತಿ ತೋರಿಸಿದೆ ಮತ್ತು ದೇಶದ ಬಾಹ್ಯಾಕಾಶ ಪರಿಶೋಧನೆಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಶಾಲೆಯ ಉಪ ಪ್ರಾಚಾರ್ಯರಾದ ಶ್ರೀ ಅಕ್ಷಯ್. ಜಿ. ರವರು ಮಾತನಾಡಿ “2025ರ ಥೀಮ್ ಭೂತಕಾಲ ಮತ್ತು ಭವಿಷ್ಯದ ಸೇತುವೆ” ಎಂಬುದಾಗಿದ್ದು, ಸಾಂಪ್ರದಾಯಿಕ ಖಗೋಳಶಾಸ್ತ್ರವನ್ನು ಗೌರವಿಸುತ್ತಾ, ಆಧುನಿಕ ಬಾಹ್ಯಾಕಾಶ ಸಾಧನೆಗಳ ಪ್ರದರ್ಶನವನ್ನು ಒತ್ತಿ ಹೇಳುತ್ತದೆ. ಇದು ಬಾಹ್ಯಾಕಾಶ ತಂತ್ರಜ್ಞಾನದ ಮಹತ್ವವನ್ನು ತಿಳಿಸಿ, ಯುವಜನರಲ್ಲಿ ಆಸಕ್ತಿ ಮೂಡಿಸುವ ಗುರಿ ಹೊಂದಿದೆ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿಜ್ಞಾನ ಶಿಕ್ಷಕರಾದ ಶ್ರೀ ಪಂಪಣ್ಣ ರೊಡ್ಡಾನವರ ಅವರು ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಅಂಗವಾಗಿ ದೂರದರ್ಶನದ ಮೂಲಕ ಇಸ್ರೋದ ಸಾಧನೆಯ ವಿವಿಧ ವಿಡಿಯೋಗಳನ್ನು ತೋರಿಸುತ್ತಾ ಮಕ್ಕಳಿಗೆ ಮಾಹಿತಿ ನೀಡಿದರು. ವಿಜ್ಞಾನ ಶಿಕ್ಷಕಿಯರಾದ ಶ್ರೀಮತಿ ಶ್ವೇತಾ ಮೇಲಗಿರಿ ಕಾರ್ಯಕ್ರಮವನ್ನು ನಿರೂಪಿಸಿದರು, ಶ್ರೀಮತಿ ಕವಿತಾ ಹೊಸಕೇರಿ ಸ್ವಾಗತಿಸಿದರು. ಹಿರಿಯ ಶಿಕ್ಷಕಿಯರಾದ ಶ್ರೀಮತಿ ರೇಣುಕಾ ವೆಂಕಟಾಪುರ ರವರು ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಸಮಸ್ತ ಶಿಕ್ಷಕ/ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.